ಚಾಮರಾಜನಗರ : ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರ ಹಿತಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಸೌಲಭ್ಯಗಳನ್ನು ಪಡೆದು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಸಲಹೆ ಮಾಡಿದರು
ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆಯ ಕೆ.ಡಿ.ಪಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಸರ್ಕಾರದ ವಿವಿಧ ಇಲಾಖೆಯ ಹಾಗೂ ನಿಗಮ ಮಂಡಳಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ನೀಡಬೇಕಾಗಿರುವ ಶಾಸನಾತ್ಮಕ ಸೌಲಭ್ಯಗಳ ಕುರಿತು ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಹೊರಗುತ್ತಿಗೆ ನೌಕರರು ಕಾರ್ಮಿಕರ ಕಾಯ್ದೆಗಳ ಬಗ್ಗೆ ಅರಿವು ಹೊಂದಬೇಕು. ಸರ್ಕಾರದ ಶಾಸನಾತ್ಮಕ ಸೌಲಭ್ಯಗಳನ್ನು ಪಡೆದು ಅಭಿವೃದ್ಧಿ ಕಾಣಬೇಕು. ಆರೋಗ್ಯ, ಭವಿಷ್ಯ ನಿಧಿ ಸೌಲಭ್ಯ, ಮಕ್ಕಳ ವಿದ್ಯಾಭ್ಯಾಸ, ಮದುವೆ ಸೌಲಭ್ಯ, ಹೆರಿಗೆ ಸೌಲಭ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು. ಕಾರ್ಮಿಕರು ಇ-ಶ್ರಮ್‍ನಲ್ಲಿ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಿ ಸರ್ಕಾರದಿಂದ ದೊರಕುವ ಸೌಕರ್ಯಗಳನ್ನು ಬಳಸಿಕೊಳ್ಳಬೇಕು ಎಂದರು. ಜಿಲ್ಲೆಯ ಸಾಕಷ್ಟು ಕಚೇರಿಗಳು, ನಿಗಮ ಮಂಡಳಿಗಳು ಹಾಗೂ ಇತರೆÀ ವಲಯಗಳಲ್ಲಿ ಸಾಕಷ್ಟು ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಕಾರ್ಮಿಕರ ಸಂಪೂರ್ಣ ವಿವರ ಪಡೆದು ಸೂಕ್ತ ಸೌಲಭ್ಯ ದೊರಕುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಇಲಾಖೆಗಳ ಅಧಿಕಾರಿಗಳು ಕಾರ್ಮಿಕರ ಸಮಸ್ಯೆಗಳನ್ನು ಅರಿತು ಪರಿಹಾರ ದೊರಕಿಸಿದಾಗ ಮಾತ್ರ ಕಾರ್ಮಿಕರು ಸಹ ಉತ್ತಮ ಪ್ರಗತಿ ಕಾಣಲು ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ತಿಳಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ. ಎಂ. ಸವಿತಾ ಅವರು ಮಾತನಾಡಿ ಕಾರ್ಮಿಕರ ಅಭಿವೃದ್ಧಿಗಾಗಿ 1935ರಲ್ಲಿ ಕಾರ್ಮಿಕ ಇಲಾಖೆ ಅಸ್ತಿತ್ವಕ್ಕೆ ಬಂದಿದ್ದು, ಕಾರ್ಮಿಕರ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರ 23 ಹಾಗೂ ರಾಜ್ಯ ಸರ್ಕಾರ 4 ಕಾಯ್ದೆಗಳನ್ನು ಅನುμÁ್ಠನಗೊಳಿಸಿದೆ. ಕೈಗಾರಿಕೆಗಳ ಅಭಿವೃದ್ಧಿ, ವಿವಾದಗಳ ರಾಜಿ ಸಂಧಾನಗಳು, ವೇತನಗಳ ಸಮಸ್ಯೆ, ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ, ಅರಣ್ಯ ಪ್ರಕರಣಗಳು, ನೋಂದಣಿಗಳ ಸಮಸ್ಯೆ ಬಗ್ಗೆ ಕಾರ್ಮಿಕ ಇಲಾಖೆಯು ಸಾಕಷ್ಟು ಕಾರ್ಯನಿರ್ವಹಿಸಿದೆ. ಹೀಗಾಗಿ ಕಾರ್ಮಿಕರು ಸರ್ಕಾರದ ಕಾಯ್ದೆ ಹಾಗೂ ಪ್ರಯೋಜನಗಳನ್ನು ಪಡೆಯಬೇಕು ಎಂದರು.
ಬೆಂಗಳೂರು ಪ್ರಾದೇಶಿಕ ಕಚೇರಿಯ ಉಪ ಕಾರ್ಮಿಕ ಆಯುಕ್ತರಾದ ಹೆಚ್.ಎಲ್. ಗುರುಪ್ರಸಾದ್ ಅವರು ಮಾತನಾಡಿ ಕಾರ್ಮಿಕ ಇಲಾಖೆಯು ಕಾರ್ಮಿಕರ ಶ್ರೇಯೋಭಿವೃದ್ದಿಗಾಗಿ ಕಾರ್ಯನಿರ್ವಹಿಸುತ್ತಿದೆ. ಅಧಿಕಾರಿಗಳು ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಕಾರ್ಮಿಕರಿಗೆ ಕನಿಷ್ಠ ವೇತನ, ಮೂಲ ಸೌಲಭ್ಯಗಳು, ಭದ್ರತಾ ಏಜೆನ್ಸಿಗಳ ಮಾಹಿತಿ ಅರಿತಿರಬೇಕು. ಕಾರ್ಮಿಕರು ಶಾಸನಾತ್ಮಕ ಸೌಲಭ್ಯಗಳ ಬಗ್ಗೆ ಸಹಾಯವಾಣಿ 155214 ಗೆ ಕರೆ ಮಾಡಿ ಸಂಬಂಧಿಸಿದ ಮಾಹಿತಿ ಪಡೆಯಬಹುದು ಎಂದರು. ಪಿಎಫ್ ಅಧಿಕಾರಿ ನಾರಾಯಣ ರಾವ್, ಸಂದೀಪ್, ಇಎಐಸಿ ಅಧಿಕಾರಿ ವಿನಯ್ ಕುಮಾರ್, ಕಾರ್ಮಿಕ ಇಲಾಖೆಯ ವೀಣಾ, ಮಹೇಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.