ಮಂಡ್ಯ: ಜಿಲ್ಲಾಡಳಿತ ವತಿಯಿಂದ ಸ್ವಚ್ಚತಾ ಆಂದೋಲನ ಆಯೋಜನೆ ಮಾಡಲಗಿತ್ತು ಸ್ವಚ್ಚತಾ ಕಾರ್ಯಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಚಾಲನೆ ನೀಡಿದುರು.
ಜಿಲ್ಲಾಧಿಕಾರಿ ಕಚೇರಿಯ ಸುತ್ತಮುತ್ತಲಿನಲ್ಲಿ ಸ್ವಚ್ಚತಾ ಕಾರ್ಯ ಮಾಡಿಲಾಯಿತ್ತು, ಡಿಸಿ ಡಾ.ಕುಮಾರ್‌ಗೆ , ಎಸ್ಪಿ ಎನ್.ಯತೀಶ್, ಸೇರಿದಂತೆ ಹಲವರು ಸಾಥ್ ನೀಡಿದರು. ಪ್ರಮುಖ ಸ್ಥಳಗಳಲ್ಲಿ ಸ್ವಚ್ಚತಾ ಕಾರ್ಯ ಮಾಡಿದ ಅಧಿಕಾರಿಗಳು, ಸ್ವಚ್ಚತಾ ಕಾರ್ಯ ಒಂದು ದಿನಕ್ಕೆ ಸೀಮಿತವಲ್ಲ. ಪ್ರತಿಯೊಬ್ಬ ಅಧಿಕಾರಿ ಹಾಗೂ ಸಾರ್ವಜನಿಕರು ಸಹ ಸ್ವಚ್ಚತಾ ಕಾರ್ಯ ಮಾಡಬೇಕು ನಮ್ಮ ಕಚೇರಿ, ಮನೆಗಳ ಸುತ್ತಮುತ್ತಲು ಸ್ವಚ್ಚತೆ ಕಾಪಾಡಬೇಕು, ಪರಿಸರ ಚೆನ್ನಾಗಿದ್ದರೆ ನಮ್ಮ ಆರೋಗ್ಯ ಕೂಡ ಚೆನ್ನಾಗಿರುತ್ತದೆ ಎಂದು ಹೇಳಿದರು.