Saturday, April 19, 2025
Google search engine

Homeರಾಜ್ಯಸುದ್ದಿಜಾಲಜನತಾ ದರ್ಶನ ಕಾರ್ಯಕ್ರಮದಲ್ಲಿ ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿ: ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

ಜನತಾ ದರ್ಶನ ಕಾರ್ಯಕ್ರಮದಲ್ಲಿ ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿ: ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

ಬಳ್ಳಾರಿ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಅಲೆದಾಡಬಹುದು, ಪರಿಹಾರ ಸಿಗದೆ, ಶೀಘ್ರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ರೂಪಿಸಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸರ್ಕಾರದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಅಹವಾಲು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದರು.

ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿರುವ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ‘ಜನತಾ ದರ್ಶನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಜನತಾದರ್ಶನ ಕಾರ್ಯಕ್ರಮ ಆಯೋಜಿಸಿ ಸಮಸ್ಯೆ ಆಲಿಸಿ, ಪರಿಶೀಲಿಸಿ ಪರಿಹಾರ ನೀಡುತ್ತಿದೆ. ಸಮಸ್ಯೆಗಳಿರುವ ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಸದುಪಯೋಗ ಪಡಿಸಿಕೊಳ್ಳಬೇಕು.

ಜನತಾದರ್ಶನ ಕಾರ್ಯಕ್ರಮದಲ್ಲಿನ ಸಮಸ್ಯೆಗಳ ಅಹವಾಲು ಸ್ವೀಕರಿಸಿ, ವಾಗ್ವಾದ ಪರಿಶೀಲಿಸಿ, ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ತಕ್ಷಣವೇ ಪರಿಹಾರ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಒಟ್ಟು 27 ಅರ್ಜಿಗಳನ್ನು ಸಲ್ಲಿಸಲಾಗಿದೆ : ನೂತನ ಜಿಲ್ಲಾಡಳಿತ ಭವನದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 27 ಅರ್ಜಿಗಳನ್ನು ಸ್ವೀಕರಿಸಲಾಯಿತು. ಕಂದಾಯ ಇಲಾಖೆ 17, ಭೂಮಾಪನ ಇಲಾಖೆ 03, ಬಳ್ಳಾರಿ ಮಹಾನಗರ ಪಾಲಿಕೆ 02, ಜಿಲ್ಲಾ ಪಂಚಾಯಿತಿ 03, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಉಪವಿಭಾಗ 01, ತಾಲೂಕು ಪಂಚಾಯಿತಿ 01 ಸೇರಿದಂತೆ ಒಟ್ಟು 27 ಅರ್ಜಿಗಳನ್ನು ಸ್ವೀಕರಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಉಪವಿಭಾಗಾಧಿಕಾರಿ ಮಹಮ್ಮದ್ ಜುಬೇರ್, ಉಪವಿಭಾಗಾಧಿಕಾರಿ ಹೇಮಂತ್, ಎಎಸ್ಪಿ ನವೀನ್ ಕುಮಾರ್, ತಹಸೀಲ್ದಾರ್ ಗುರುರಾಜ ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular