ಧಾರವಾಡ: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಇಂದು ಮತ್ತು ನಾಳೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಆಯೋಜಿಸಿರುವ ಮತದಾರರ ನೋಂದಣಿ ವಿಶೇಷ ಅಭಿಯಾನದ ಪ್ರಗತಿ ಪರಿಶೀಲನೆಗಾಗಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಇಂದು ಮಧ್ಯಾಹ್ನ ಧಾರವಾಡ ನಗರದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.
ನೋಂದಣಿ ಅಭಿಯಾನದ. ವಿದ್ಯಾರಣ್ಯ ಶಾಲೆಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಹಸೀಲ್ದಾರ್ ದೊಡ್ಡಪ್ಪ ಹೂಗಾರ, ಕಂದಾಯ ನಿರೀಕ್ಷಕ ಗುರು ಸುಣಗಾರ, ಗ್ರಾಮಾಡಳಿತ ಅಧಿಕಾರಿ ಕಸಬಾ, ಮತ ಠಾಣಾಧಿಕಾರಿಗಳು ಉಪಸ್ಥಿತರಿದ್ದರು. ಕುವೆಂಪು ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರು ಇಂದು ಮಧ್ಯಾಹ್ನ ಅಮ್ಮಿನಭಾವಿ ಗ್ರಾಮದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ, ಪ್ರಚಾರ ಕಾರ್ಯವನ್ನು ಪರಿಶೀಲಿಸಿದರು. ಜಿಲ್ಲಾಧಿಕಾರಿ ಕಚೇರಿ ತಹಸೀಲ್ದಾರ್ ಪ್ರವೀಣ ಹುಚ್ಚಣ್ಣನವರ, ಗ್ರಾಮ ಆಡಳಿತಾಧಿಕಾರಿ ವೆಂಕಟೇಶ ಹಟ್ಟಿ, ಮತಗಟ್ಟೆ ಅಧಿಕಾರಿಗಳು ಉಪಸ್ಥಿತರಿದ್ದರು.
