ಮದ್ದೂರು: ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಡಾ.ಕುಮಾರ್ ದಿಢೀರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಪ್ರತಿಯೊಂದು ಶಾಖೆಗೆ ತೆರಳಿ ಕಚೇರಿಯ ಸ್ವಚ್ಛತೆಯ ಬಗ್ಗೆ ಪರಿಶೀಲಿಸಿದ್ದಾರೆ. ಈ ವೇಳೆ ಸಂಬಂಧಪಟ್ಟ ಶಾಖೆಯ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಡಿಸಿ, ನಿಮ್ಮ ಮನೆಯ ರೀತಿಯಲ್ಲೇ ಕಚೇರಿಯನ್ನು ಕೂಡ ಸ್ವಚ್ಛತೆಯಿಂದ ಇಟ್ಟುಕೊಳ್ಳುವುದನ್ನ ಕಲಿಯಿರಿ ಎಂದು ಹೇಳಿದ್ದಾರೆ.
ತಾಲೂಕು ಕಚೇರಿಯ ನವೀಕರಣಕ್ಕೆ ಸುಮಾರು 75 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಗಳ ಬಗ್ಗೆ ವೀಕ್ಷಣೆ ಮಾಡಿ ಶೀಘ್ರವಾಗಿ ಕಾಮಗಾರಿ ಮುಗಿಸುವಂತೆ ಸೂಚನೆ ನೀಡಿದರು.
ಬೆಂಗಳೂರು-ಮೈಸೂರು ಹೆದ್ದಾರಿಯ ಅಪೂರ್ಣ ಕಾಮಗಾರಿ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ದೂರು ನೀಡಿದ್ದು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಶೀಘ್ರವಾಗಿ ಅಪೂರ್ಣ ಕಾಮಗಾರಿ ಸರಿಪಡಿಸಲಾಗುತ್ತೆ ಎಂದು ಹೇಳಿದರು.
ಇದೇ ವೇಳೆ ಎಸಿ ಶಿವಮೂರ್ತಿ, ತಹಶೀಲ್ದಾರ್ ಸೋಮಶೇಖರ್ ಭಾಗಿಯಾಗಿದ್ದರು.