ಮಂಡ್ಯ: ಜಿಲ್ಲಾಧಿಕಾರಿ ಡಾ.ಕುಮಾರ ಅವರು ಇಂದು ಶ್ರೀರಂಗಪಟ್ಟಣ ತಾಲ್ಲೂಕು ಕಛೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲ್ಲೂಕು ಕಛೇರಿಯನ್ನು ಪರಿಶೀಲಿಸಿ ಕಛೇರಿಗೆ ಬರುವ ಸಾರ್ವಜನಿಕರನ್ನು ಅಲೆದಾಡಿಸದೆ ನಿಗದಿತ ಸಮಯಕ್ಕೆ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ನಂತರ ಮತದಾರ ಪಟ್ಟಿ ಪರಿಷ್ಕರಣೆ ೨೦೨೪ರ ಸಂಬಂಧ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.