ಗುನಾ/ಮಧ್ಯಪ್ರದೇಶ: ಬಸ್ ಹಾಗೂ ಡಂಪರ್ ಟ್ರಕ್ ನಡುವೆ ತಡರಾತ್ರಿ ಭೀಕರ ಅಪಘಾತ ಸಂಭವಿಸಿ, ೧೨ ಮಂದಿ ಸಜೀವ ದಹನವಾದ ಆಘಾತಕಾರಿ ಘಟನೆ ವರದಿಯಾಗಿದೆ.
ಮೃತದೇಹಗಳನ್ನು ಹೊರ ತೆಗೆಯುವ ಹಾಗೂ ಗಾಯಾಳುಗಳನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ. ಘಟನೆಗೆ ಸಂಬಂಧಿಸಿದಂತೆ ಗುಣ ಕಲೆಕ್ಟರ್ ತರುಣ್ ರಾಠಿ ಮಾತನಾಡಿ, ಅಪಘಾತದ ಬಗ್ಗೆ ಆಡಳಿತ ಮಂಡಳಿ ತನಿಖೆ ನಡೆಸುತ್ತಿದೆ. ಇದಲ್ಲದೆ, ಈ ಘಟನೆಯ ನಂತರ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಗಳಿಗೆ ತಲಾ ೪ ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ೫೦,೦೦೦ ರೂಪಾಯಿಗಳನ್ನು ಪರಿಹಾರ ಘೋಷಿಸಿದ್ದಾರೆ. ಇದರೊಂದಿಗೆ ಮುಖ್ಯಮಂತ್ರಿಗಳು ಘಟನೆಯ ತನಿಖೆಗೂ ಆದೇಶಿಸಿದ್ದಾರೆ ಎಂದು ತಿಳಿಸಿದರು.