Sunday, February 8, 2026
Google search engine

Homeಅಪರಾಧಡಿಕ್ಕಿ: ಮಹಿಳೆ ಸಾವು; ಸವಾರ ಗಂಭೀರ

ಡಿಕ್ಕಿ: ಮಹಿಳೆ ಸಾವು; ಸವಾರ ಗಂಭೀರ

ಮಹಿಳೆಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ರವಿವಾರ ಬೆಳಿಗ್ಗೆ ನಡೆದಿದೆ.
ಮೃತ ಮಹಿಳೆಯನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಬೈಕ್ ಸವಾರ ಪುತ್ತೂರು ಮೂಲದವರು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

RELATED ARTICLES
- Advertisment -
Google search engine

Most Popular