ಮಂಡ್ಯ : ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ ೫೦ ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬದರಿಕೊಪ್ಪಲದಲ್ಲಿ ಗಣಪತಿ ವಿಸರ್ಜನೆ ವೇಳೆ ಹಿಂದೂ ಮುಸ್ಲಿಂ ಗಲಾಟೆ ನಡೆದಿದ್ದು,ಗಣಪತಿ ಮೇಲೆ ಮುಸ್ಲಿಂರು ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಪೆಟ್ರೋಲ್ ಬಾಂಬ್ ಎಸೆದು ಮುಸ್ಲಿಮರ ಅಂಗಡಿಗಳಿಗೆ ಬೆಂಕಿ ಹಚ್ಚಿರುವ ವರದಿಯಾಗಿದೆ. ಸೆಪ್ಟಂಬರ್ ೧೪ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಗಲಾಟೆ ಸಂಬಂಧ ಪೊಲೀಸರು ನಿನ್ನೆ ರಾತ್ರಿಯೇ ೨೦ ಮಂದಿಯನ್ನು ವಶಕ್ಕೆ ಪಡೆದಿದ್ದು, ಬಳಿಕ ಅನ್ಯಕೋಮಿನ ೩೦ ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ.

ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಅದ್ದೂರಿಯಾಗಿ ವಿಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನುಕೋಮಿನವರು ಕಲ್ಲೆಸೆದಿದ್ದಾರೆ. ಗಣೇಶ ಮೂರ್ತಿಯ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಈ ವೇಳೆ ಹಿಂದೂ ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ, ನೂಕಾಟ ನಡೆದಿದೆ. ಈ ವೇಳೆ ನಾಗಮಂಗಲದ ಟೌನ್ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.