Saturday, April 19, 2025
Google search engine

Homeರಾಜ್ಯಕೋಮು ಗಲಭೆ: ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತರುವ ಕಿಡಿಗೇಡಿಗಳ ವಿರುದ್ಧ ಕ್ರಮ : ಸಿಎಂ...

ಕೋಮು ಗಲಭೆ: ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತರುವ ಕಿಡಿಗೇಡಿಗಳ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಕಲ್ಲು ತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾಗಮಂಗಲ ಗಲಭೆ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ ೫೦ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದರು.

ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular