Friday, April 4, 2025
Google search engine

Homeರಾಜಕೀಯ2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ: ಡಿಕೆ ಶಿವಕುಮಾರ್‌

2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ: ಡಿಕೆ ಶಿವಕುಮಾರ್‌

ಬೆಂಗಳೂರು: ಸುಳ್ಳನ್ನು ಹೇಳಿ ಅಪ್ರಚಾರ ಮಾಡಿದ್ದಾರೆ. ಮತದಾರರು ಪ್ರಜ್ಞಾವಂತರಿದ್ದಾರೆ. ಉಪ ಚುನಾವಣೆಯ ಗೆಲುವು 2028ರ ವಿಧಾನಸಭೆ ಚುನಾವಣೆಗೆ ಗೆಲುವಿಗೆ ದಿಕ್ಸೂಚಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಬಣ್ಣಿಸಿದ್ದಾರೆ.

ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಿಖಿಲ್‌ ಸೋತಿದ್ದಾರೆ ಎಂದು ಹೇಳಲ್ಲ. ಕುಮಾರಸ್ವಾಮಿ ವಿರುದ್ಧ ಜನ ತೀರ್ಪು ನೀಡಿದ್ದಾರೆ. ಶಿಗ್ಗಾವಿಯಲ್ಲಿ ಭರತ್ ಬೊಮ್ಮಾಯಿ ಸೋಲು ಎಂದು ಹೇಳುವುದಿಲ್ಲ. ಅವರ ತಂದೆ ಬೊಮ್ಮಾಯಿ ಅವರದ್ದು ಎಂದು ಹೇಳುತ್ತೇನೆ ಎಂದರು.

ವಿಪಕ್ಷಗಳು ನಮ್ಮ ಗ್ಯಾರಂಟಿಯನ್ನು ಟೀಕೆ ಮಾಡಿದ್ದವು. ವಿಪಕ್ಷಗಳು ಟೀಕೆ ಮಾಡುವುದನ್ನು ಬಿಡಿ ಎಂದು ಜನ ತೀರ್ಪು ಕೊಟ್ಟಿದ್ದಾರೆ. ಜನರ ಬದುಕಿನ ಮೇಲೆ ರಾಜಕೀಯ ಮಾಡಬೇಡಿ ಅಂತ ಜನ ಸಂದೇಶ ಕೊಟ್ಡಿದ್ದಾರೆ. ಟೀಕೆಗಳು ಸಾಯ್ತವೇ, ಕೆಲಸ ಉಳಿಯತ್ತವೆ. ಇದು ಮತ್ತೊಮ್ಮೆ ಸಾಬೀತಾಗಿದೆ ಎಂದು ಹೇಳಿದರು.

ಜನರಿಗೆ ಸರಿಯಾಗಿ ಗ್ಯಾರಂಟಿ ಹೋಗುತ್ತಿಲ್ಲ ಎಂದು ವಿಪಕ್ಷಗಳು ಟೀಕಿಸಿದ್ದವು. 56 ಸಾವಿರ ಕೋಟಿ ರೂ. ಗ್ಯಾರಂಟಿ ಗೆ ಕೊಟ್ಟಿದ್ದೇವೆ. ಪ್ರತಿ ಕ್ಷೇತ್ರಕ್ಕೆ 200 ಕೋಟಿ ರೂ. ಹಣ ಹೋಗಿದೆ. ಇದೆಲ್ಲವು ಅಭಿವೃದ್ಧಿ ಅಲ್ಲವೇ ಎಂದು ಪ್ರಶ್ನಿಸಿದರು.

RELATED ARTICLES
- Advertisment -
Google search engine

Most Popular