ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಸ್ಪರ್ಧೆಗಳಲ್ಲಿ ಭಾಗವಹಿಸುವ ಸ್ಪರ್ದಾಳುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪ ಪ್ರಾಂಶುಪಾಲರಾದ ವತ್ಸಲ ಹೇಳಿದರು.
ಅವರು ಸಾಲಿಗ್ರಾಮ ಗ್ರಾಮ ಪಂಚಾಯಿತಿ ಗ್ರಂಥಾಲಯದ ವತಿಯಿಂದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಿಶ್ವ ಕ್ರೀಡಾ ದಿನಾಚರಣೆಯ ಅಂಗವಾಗಿ ಓದುವ ಬೆಳಕು ಕಾರ್ಯಕ್ರಮದಡಿಯಲ್ಲಿ ಆಯೋಜಿಸಿದ್ದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ ಮಾತನಾಡಿದರು.
ಓದಿನ ಜೊತೆ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯವು ಉತ್ತಮವಾಗಿರುತ್ತದೆ. ಪ್ರತಿಯೊಬ್ಬರು ನಮ್ಮಲ್ಲಿರುವ ಅಳುಕು ಸ್ವಭಾವವನ್ನು ತೊರೆದು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ತಮ್ಮಲ್ಲಿರುವ ಸುಪ್ತ ಪ್ರತಿಭೆಯು ಅನಾವರಣಗೊಳ್ಳಲು ಸಾಧ್ಯವಾಗುತ್ತದೆ. ಆ ಮೂಲಕ ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಿ ನಾಡಿಗೆ ಕೀರ್ತಿ ತರಬೇಕು ಎಂದರು.
ಈ ಸಂಧರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗ್ರಂಥಪಾಲಕಿ ಎಸ್.ಎಸ್.ದಿವ್ಯಕುಮಾರಿ, ಶಿಕ್ಷಕರುಗಳಾದ ಮಧುಕುಮಾರ್, ನಾರಾಯಣ್, ಶಶಿಕುಮಾರ್, ಜಯಕುಮಾರ್, ಪುನೀತ್ ಕುಮಾರ್, ಮಮತ, ಮಲ್ಲಮ್ಮ, ಲೋಕೇಶ್ವರಿ, ಸುಮಿತ್ರಾ, ವಿಜಯ್ ಕುಮಾರ್, ಗಿರೀಶ್, ರೇಖಾ, ಸುನೀಲ್ ಕುಮಾರ್, ಪ್ರತಾಪ್, ಸುಮ, ಶಾಂತ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.