Tuesday, April 22, 2025
Google search engine

Homeರಾಜ್ಯಬಿಎಸ್‍’ವೈ ವಿರುದ್ಧ ದೂರು: ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ಸಿಕ್ಕಿದ್ದು, ತನಿಖೆ ನಡೆಸುತ್ತೇವೆ: ಡಾ....

ಬಿಎಸ್‍’ವೈ ವಿರುದ್ಧ ದೂರು: ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ಸಿಕ್ಕಿದ್ದು, ತನಿಖೆ ನಡೆಸುತ್ತೇವೆ: ಡಾ. ಪರಮೇಶ್ವರ್

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪನವರ ವಿರುದ್ಧ ನಿನ್ನೆ ರಾತ್ರಿ ಮಹಿಳೆ ಕೈಬರಹದ ಬದಲಾಗಿ ಟೈಪ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಇಂದಿನಿಂದ ತನಿಖೆ ನಡೆಸುತ್ತಾರೆ. ಇದೊಂದು ಸೂಕ್ಷ್ಮ ವಿಚಾರವಾಗಿರುವುದರಿಂದ ಗೃಹ ಇಲಾಖೆ ಸಂಪೂರ್ಣ ಮಾಹಿತಿ ತೆಗೆದುಕೊಂಡು ತನಿಖೆ ಮಾಡುತ್ತೇವೆ. ತನಿಖೆ ಆಗುವವರೆಗೆ ಯಾವುದೇ ವಿಷಯ ಮಾತನಾಡುವುದಿಲ್ಲ ಎಂದಿದ್ದಾರೆ.

ದೂರು ನೀಡಿರುವ ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ನಮಗೆ ಸಿಕ್ಕಿದ್ದು, ತನಿಖೆಯ ನಂತರವಷ್ಟೇ ಸ್ಪಷ್ಟ ಚಿತ್ರಣ ಸಿಗಲಿದೆ. ಇದೊಂದು ಸೂಕ್ಷ್ಮ ವಿಚಾರ. ಇದು ಹಿರಿಯ ರಾಜಕಾರಣಿಯಾಗಿರುವ ಮಾಜಿ ಸಿಎಂಗೆ ಸಂಬಂಧಿಸಿದ್ದು. ಪೊಲೀಸರು ದೂರು ತೆಗೆದುಕೊಂಡು ತನಿಖೆ ಆರಂಭಿಸಿದ್ದಾರೆ, ತನಿಖೆ ಪೂರ್ಣಗೊಳ್ಳುವವರೆಗೆ, ಎಚ್ಚರಿಕೆಯಿಂದ ಮಾತನಾಡಬೇಕಾಗುತ್ತದೆ ಎಂದರು.

ಮಹಿಳೆ ಮತ್ತು ಅವರ ಮಗಳಿಗೆ ಪೊಲೀಸರು ರಕ್ಷಣೆ ನೀಡುತ್ತಾರೆಯೇ ಎಂದು ಕೇಳಿದಾಗ, ಗೃಹ ಸಚಿವರು ಈಗ ಅದು ಅಗತ್ಯವಿಲ್ಲ ಎಂದು ಹೇಳಿದರು. ಅಗತ್ಯವಿದ್ದರೆ, ಪೊಲೀಸರು ಮಹಿಳೆಗೆ ರಕ್ಷಣೆ ನೀಡುತ್ತಾರೆ, ಕೇಸು ದಾಖಲು ಹಿಂದೆ ಯಾವುದೇ ರಾಜಕೀಯ ಪ್ರೇರಣೆ ಕೃತ್ಯಗಳಿಲ್ಲ ಎಂದರು.

ಯಡಿಯೂರಪ್ಪ ವಿರುದ್ಧ ಆಪಾದಿತ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸಲ್ಲಿಸಿರುವ ದೂರಿನಲ್ಲಿ, ಫೆಬ್ರವರಿ 2 ರಂದು ಸಹಾಯ ಪಡೆಯಲು ಸಂತ್ರಸ್ತ ಮಹಿಳೆ ಹೋಗಿದ್ದ ವೇಳೆ 17 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಎಫ್‌ಐಆರ್ ನಲ್ಲಿ ಆರೋಪಿಸಲಾಗಿದೆ.

RELATED ARTICLES
- Advertisment -
Google search engine

Most Popular