ಮಂಡ್ಯ: ನೆನ್ನೆ ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆ ವೇಳೆ ಶಾಸಕ ಪಿ.ಎಂ ನರೇಂದ್ರಸ್ವಾಮಿ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರಿಂದ ಮಂಡ್ಯದ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿಗೆ ದೂರು ಸಲ್ಲಿಸಲಾಯಿತು.
ಜೊತೆಗೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯ ಮಾಡಲಾಯಿತು.
ಬಿಜೆಪಿ ಕಾರ್ಯಕರ್ತ ಸಿಟಿ ಮಂಜುನಾಥ್ ನೇತೃತ್ವದಲ್ಲಿ ದೂರು ನೀಡಲಾಯಿತು.