Monday, April 21, 2025
Google search engine

Homeರಾಜ್ಯಸುದ್ದಿಜಾಲಮಾ.೧೩ ಮತ್ತು ೧೫ ರಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ

ಮಾ.೧೩ ಮತ್ತು ೧೫ ರಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ

ಮಡಿಕೇರಿ: ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಮಾ.೧೩ ರಂದು ಕುಶಾಲನಗರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಾ.೧೫ ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ ೧೧ ಗಂಟೆಯಿಂದ ೧ ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ. ೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular