ಮಂಡ್ಯ: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿಸಿ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಿಐಡಿ ಅಧಿಕಾರಿಗಳ ತಂಡ ಭೇಟಿ ನೀಡಿದೆ.
ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಸಿಐಡಿ ಐಜಿಪಿ ಪ್ರವೀಣ್ ಮಧುಕರ್ ಪವಾರ್ ನೇತೃತ್ವದ ತಂಡ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಂಟಿ ಕೃಷಿ ನಿರ್ದೇಶಕ ಅಶೋಕ್ ವಿ ಎಸ್ ಕಚೇರಿಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಅಧಿಕಾರಿಗಳು ಜೆಡಿ ಅಶೋಕ್ ರಿಂದ ಮಾಹಿತಿ ಪಡೆಯುತ್ತಿದ್ದಾರೆ.