ಮಂಡ್ಯ: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಸುಳ್ಳು ದೂರು ನೀಡಿದ್ದಾರೆಂದು ಆರೋಪಿಸಿ ನಾಗಮಂಗಲದಲ್ಲಿ ಚಲುವರಾಯಸ್ವಾಮಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ನಾಗಮಂಗಲ ಪಟ್ಟಣದ ತಾಲೂಕು ಕಚೇರಿ ಮುಂದೆ ಬೆಂಬಲಿಗರ ಪ್ರತಿಭಟಿಸಿದ್ದು, ಮಾಜಿ ಸಿ.ಎಂ. ಕುಮಾರಸ್ವಾಮಿ ಹಾಗೂ ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕು ಕಚೇರಿಯಿಂದ ಡಿವೈಎಸ್ಪಿ ಕಚೇರಿವರೆಗೂ ಪ್ರತಿಭಟನಾ ಜಾಥಾ ನಡೆಸಿ ಡಿಎಸ್ ಪಿಗೆ ದೂರು ನೀಡಿದರು.
ಪ್ರತಿಭಟನೆಯಲ್ಲಿ ನೂರಾರು ಬೆಂಗಲಿಗರು ಭಾಗಿಯಾಗಿದ್ದರು.