Thursday, April 10, 2025
Google search engine

Homeಅಪರಾಧಕಾನೂನುಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ​​ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಮಾಜಿ ಮುಡಾ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ಅವರ ವಿರುದ್ಧ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಮಾಜಿ ಮುಡಾ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಕೂಡಲೇ ಅಧಿಕಾರಿಗಳ ವಿರುದ್ಧ ಕ್ರಿಮಿನಲ್​​ ಕೇಸ್ ದಾಖಲಿ, ಅವರನ್ನು ಬಂಧಿಸಬೇಕು. ಈ ಸಂಬಂಧ ಭೂಸ್ವಾಧೀನ ಅಧಿಕಾರಿಗಳು, ಸರ್ಕಾರದ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಅಕ್ರಮದಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಅಧಿಕಾರಿಗಳಿಂದಲೇ ಹಣ ವಸೂಲಿ ಮಾಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದೂರಿನಲ್ಲಿ ಏನಿದೆ?

ನಾನು (ಶಾಸಕ ಶ್ರೀವತ್ಸ್​​​) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯನಾದ ನಂತರ ಪ್ರಾಧಿಕಾರದ ನಿವೇಶನಗಳನ್ನು ಕಾನೂನು ಬಾಹಿರವಾಗಿ ಹಾಗೂ ಅಕ್ರಮವಾಗಿ 50:50 ಅನುಪಾತದಲ್ಲಿ ಸರಿ ಸುಮಾರು 5.00 ಲಕ್ಷ ಚ.ಅ. ಗೂ ಹೆಚ್ಚಿನ ನಿವೇಶನಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿರುವುದು ಕಂಡುಬಂದ ಹಿನ್ನಲೆಯಲ್ಲಿ ಅಂತಹ ಆದೇಶಗಳನ್ನು ರದ್ದುಗೊಳಿಬೇಕು.

ಹಾಗೂ ಈ ಹಿಂದಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ, ಕೆಎಎಸ್ ಅಧಿಕಾರಿ ದಿನೇಶ್ ಕುಮಾರ್ ಜಿ.ಟಿರವರ ವಿರುದ್ಧ ಮತ್ತು ಇಂತಹ ಪ್ರಕರಣಗಳಲ್ಲಿ ಭಾಗಿಯಾದಂತಹ ಇತರೆ ಅಧಿಕಾರಿ ವರ್ಗದವರ ಮೇಲೆ ಸೂಕ್ತ ತನಿಖೆ ನಡೆಸಿ ಸರಿಯಾದ ಶಿಸ್ತು ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಮಾನ್ಯ ಪ್ರಧಾನ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಇವರಿಗೆ ಸೂಕ್ತ ದಾಖಲೆಗಳೊಂದಿಗೆ ಪತ್ರ ಬರೆದಿದ್ದರೂ ಸಹ ಈ ತನಕ ಇವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಇಂತಹ ಅಕ್ರಮಗಳಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 5,000 ಕೋಟಿಗಳಷ್ಟು ನಷ್ಟ ಉಂಟಾಗಿರುತ್ತದೆ. ಕಾನೂನು ಬಾಹಿರವಾಗಿ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವಂತಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಈ ಹಿಂದಿನ ಆಯುಕ್ತರಗಳಾದ ನಟೇಶ್, ಕೆ.ಎ.ಎಸ್ ಮತ್ತು ದಿನೇಶ್ ಕುಮಾರ್ ಜಿ.ಟಿ. ಕೆ.ಎ.ಎಸ್ ಹಾಗೂ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ್ದಾರೆ. ಇವರ ವಿರುದ್ಧ ತನಿಖೆ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸಿ.

ಈ ಕೂಡಲೇ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿ ವರ್ಗದವರನ್ನು ಬಂಧಿಸಿ ಸರ್ಕಾರಕ್ಕೆ ಆಗಿರುವ ನಷ್ಟವನ್ನು ಸದರಿ ಅಧಿಕಾರಿಗಳಿಂದಲೇ ಭರಿಸುವಂತೆ ಸೂಕ್ತ ಆದೇಶ ಹೊರಡಿಸಬೇಕೆಂದು ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular