ರಾಮನಗರ: ಸಂಪೂರ್ಣ ಬೆಳೆ ಸಮೀಕ್ಷೆಗೆ ವಾರದಗಡುವು, ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಲು ಸೂಚನೆ, ಬಗರ್ ಹುಕುಂ ಅರ್ಜಿ ವಿಲೇಗೆ ಆರು ತಿಂಗಳ ಗಡುವು, ಪ್ರಾಯೋಗಿಕರೀ ಸರ್ವೇಗೆ ಚಾಲನೆ, ಯಶಸ್ವಿಯಾದರೆ ರಾಜ್ಯಾದ್ಯಂತರೀ ಸರ್ವೇ ಸಾಧ್ಯತೆ. ಬೆಳೆ ಪರಿಹಾರ ಆನ್ಲೈನ್ ಮೂಲಕವೇ ರೈತರಿಗೆತಲುಪಲಿದ್ದು, ಅವರ ಮಾಹಿತಿ ಬಿಟ್ಟುಹೋದರೆ ಮ್ಯಾನ್ಯುವಲ್ ಆಗಿ ಅವರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ. ಹೀಗಾಗಿ ಅಧಿಕಾರಿಗಳು ಉಡಾಫೆ ಬಿಟ್ಟು ಶೇ.೧೦೦ ಎಲ್ಲಾ ರೈತರ ಬೆಳೆ ಸಮೀಕ್ಷೆಯ ಮಾಹಿತಿಯನ್ನು ಒಂದು ವಾರದಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಿ ಅವರಿಗೆ ನ್ಯಾಯಯುತ ಪರಿಹಾರ ತಲುಪಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.
ರಾಮನಗರದಲ್ಲಿ ಇಂದು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದಅವರು, ರಾಜ್ಯ ಈ ವರ್ಷ ಇತಿಹಾಸಕಾಣದ ಬರಕ್ಕೆತುತ್ತಾಗಿದೆ. ಮಳೆ ಇಲ್ಲದ ಕಾರಣ ರೈತರು ಪರಿತಪಿಸುವಂತಾಗಿದೆ.ಬೆಳೆ ಕೈಸೇರದೆ ಸಂಕಷ್ಟಕ್ಕೀಡಾಗಿದ್ದಾರೆ ಇಂತಹ ಸಂದರ್ಭದಲ್ಲಿ ನಾವು ರೈತರ ಪರ ನಿಲ್ಲಬೇಕಾಗಿದೆ.ಹೀಗಾಗಿ ರೈತರಿಗೆ ನ್ಯಾಯಯುತ ಪರಿಹಾರತಲುಪಿಸಲು ಬೆಳೆ ಸಮೀಕ್ಷೆಅಗತ್ಯ ಎಂದರು. ರಾಮನಗರದಲ್ಲಿ ೨೪೨ ಗ್ರಾಮ ಆಡಳಿತ ಅಧಿಕಾರಿಗಳ ವೃತ್ತ ಇದೆ.ಆದರೆ, ಈವರೆಗೆ ಸಂಪೂರ್ಣ ಬೆಳೆ ಸಮೀಕ್ಷೆಆಗಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅನೇಕ ರೈತರಿಗೆ ಅನ್ಯಾಯವಾಗುತ್ತದೆ ಎಂದು ಕಿಡಿಕಾರಿದ ಸಚಿವರು, ಮುಂದಿನ ಒಂದು ವಾರದಲ್ಲಿ ಬೆಳೆ ಸಮೀಕ್ಷೆ ನಡೆಸಿ ಫ್ರೂಟ್ಸ್‌ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಸಮಯದಗಡುವು ನೀಡಿದರು.
ಕುಡಿಯುವ ನೀರು ಪೂರೈಸಿ: ರಾಮನಗರ ಭಾಗದಲ್ಲಿಎಲ್ಲೇಕುಡಿಯುವ ನೀರಿನ ಸಮಸ್ಯೆ ಉಂಟಾದರೂ ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಿ ಎಂದು ಸಚಿವಕೃಷ್ಣ ಬೈರೇಗೌಡಅವರು ಸೂಚಿಸಿದರು. ಈ ವರ್ಷ ಬರಗಾಲ ಎದುರಾಗಿದೆ. ಮುಂದಿನ ಬೇಸಿಗೆ ಅಥವಾ ಅದಕ್ಕೂ ಮುನ್ನವೇ ರಾಮನಗರ ಭಾಗದ ಕೆಲವೆಡೆಕುಡಿಯುವ ನೀರಿನ ಸಮಸ್ಯೆಎದುರಾಗುವ ಸಾಧ್ಯತೆ ಇರುತ್ತದೆ.ಅಧಿಕಾರಿಗಳು ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ ಎಂದು ಸರ್ವೆ ನಡೆಸಿ ನೀರಿನ ಸಮಸ್ಯೆಕಂಡುಬರುವ ಕಡೆಗಳಲ್ಲಿ ಖಾಸಗಿ ಟ್ಯಾಂಕರ್ ಮೂಲಕ ನೀರನ್ನು ಪೂರೈಸಿ.ಯಾವ ಭಾಗದಲ್ಲೂ ಸಾರ್ವಜನಿಕರು ನೀರಿನ ಸಮಸ್ಯೆಎದುರಿಸದಂತೆ ನೋಡಿಕೊಳ್ಳಿ, ಈ ಖರ್ಚಿಗೆ ಜಿಲ್ಲಾಧಿಕಾರಿಗಳ ಖಾತೆಯಿಂದಎಸ್ ಡಿ ಆರ್‌ಎಫ್ ಹಣವನ್ನು ಬಳಸಿಕೊಳ್ಳಿ ಎಂದು ಸಲಹೆ ನೀಡಿದರು.
ನರೇಗಾ ಕೆಲಸದ ದಿನ ೧೫೦ ದಿನಕ್ಕೆ ಏರಿಕೆ!: ಸಭೆಯಲ್ಲಿ ನರೇಗಾ ಕೆಲಸದ ದಿನದಏರಿಕೆಯ ಬಗ್ಗೆಯೂಚರ್ಚೆ ನಡೆಯಿತು.ಈ ಬಗ್ಗೆ ಗಮನ ಸೆಳೆದ ಸಚಿವ ಕೃಷ್ಣ ಬೈರೇಗೌಡಅವರು, ರಾಜ್ಯದಲ್ಲಿ ಈಗಾಗಲೇ ಬರ ಘೋಷಿಸಲಾಗಿದೆ.ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಬರ ಘೋಷಿಸಿದ ತಕ್ಷಣ ನರೇಗಾ ಕೆಲಸದ ದಿನ ೧೦೦ ರಿಂದ ೧೫೦ ದಿನಕ್ಕೆ ಏರಿಕೆಯಾಗುತ್ತದೆ.ಈಗಾಗಲೇ ಈ ಬಗ್ಗೆ ಕೇಂದ್ರಕ್ಕೆ ಪತ್ರವನ್ನೂ ಬರೆಯಲಾಗಿದೆ.ಹೀಗಾಗಿ ಯಾವುದೇ ಸಂದರ್ಭದಲ್ಲಿಕೇಂದ್ರ ಸರ್ಕಾರ ಈ ಬಗ್ಗೆ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ ಎಂದರು.
ಮುಂದುವರೆದು, ರಾಜ್ಯದಲ್ಲಿ ೩ ಲಕ್ಷ ನರೇಗಾಕಾರ್ಡುದಾರರ ಕೆಲಸದ ಅವಧಿ ಈಗಾಗಲೇ ೮೦ ದಿನ ದಾಟಿದೆ.ಒಂದು ವೇಳೆ ೧೦೦ ದಿನ ದಾಟಿದ್ದರೆಅಂತವರಿಗೆ ಮತ್ತೆ ಕೆಲಸದ ದಿನ ವಿಸ್ತರಿಸುವುದು ಸಾಧ್ಯವಿಲ್ಲ. ಹೀಗಾಗಿ ಅಧಿಕಾರಿಗಳು ಈ ಬಗ್ಗೆ ನಿಗಾ ವಹಿಸಬೇಕು, ಯಾರಿಗೂತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಬಗರ್ ಹುಕುಂ ಅರ್ಜಿ ವಿಲೇಗೆ ಆರು ತಿಂಗಳ ಗಡುವು: ವಿಲೇವಾರಿಯಾಗದ ಬಗರ್ ಹುಕುಂ ಅರ್ಜಿಗಳ ಬಗ್ಗೆ ಗಮನ ಸೆಳೆದ ಸಚಿವ ಕೃಷ್ಣ ಬೈರೇಗೌಡ ಅವರು, ನಮೂನೆ ೫೦, ೫೩, ೫೭ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಮನಗರದಲ್ಲಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ನಮೂನೆ ೫೭ರ ಅಡಿಯಲ್ಲೇ ಸುಮಾರು ೨೭,೦೦೦ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ ಈವರೆಗೆ ೧೦,೦೦೦ ಅರ್ಜಿಗಳು ಮಾತ್ರ ವಿಲೇವಾರಿಯಾಗಿದೆ. ಹೀಗಾಗಿ ರೈತರು ದಿನಂಪ್ರತಿ ಸರ್ಕಾರಿ ಕಚೇರಿಗಳಿಗೆ ಅಲೆಯುವಂತಾಗಿದೆ.ಇದು ಸರಿಯಲ್ಲ. ಹೀಗಾಗಿ ಈ ಎಲ್ಲಾಅರ್ಜಿಗಳನ್ನು ಮುಂದಿನ ೬ ತಿಂಗಳಲ್ಲಿ ಬಾಕಿ ಉಳಿಸದಂತೆ ವಿಲೇವಾರಿಗೊಳಿಸಬೇಕು, ಅರ್ಹರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು ತಿಳಿಸಿದರು.
ಮುಂದುವರೆದು, ಬಗರ್ ಹುಕುಂ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ ಪ್ರಭಾವಿಗಳ ಅಥವಾರಾಜಕೀಯ ಪಕ್ಷದ ನಾಯಕರಿಗೆ ಅನುಕೂಲವಾಗುವಂತೆ ವರ್ತಿಸಬಾರದು, ಬದಲಾಗಿ ಬಡಜನರಿಗೆ ಮತ್ತುಅರ್ಹರಿಗೆ ನ್ಯಾಯಒದಗಿಸಲು ಬದ್ಧರಾಗಿರಬೇಕು.ನಿಜಕ್ಕೂ ಉಳುಮೆಯಲ್ಲಿ ತೊಡಗಿರುವರೈತರಿಗೆ ಮಾತ್ರ ಸಾಗುವಳಿ ಚೀಟಿ ನೀಡಬೇಕು.ಆದರೆ, ಬಗರ್ ಹುಕುಂ ಅಡಿಯಲ್ಲಿ ಗೋಮಾಳ ಜಮೀನನ್ನು ನೀಡಲು ಸಾಧ್ಯವಿಲ್ಲದಕಾರಣ ಅಧಿಕಾರಿಗಳು ಈಬಗ್ಗೆಯೂಎಚ್ಚರಿಕೆವಹಿಸಬೇಕು ಎಂದು ಅವರು ತಾಕೀತು ಮಾಡಿದರು.