Monday, April 21, 2025
Google search engine

Homeಸ್ಥಳೀಯವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ: ಡಾ ಎಸ್. ಸೆಲ್ವ ಕುಮಾರ್

ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ: ಡಾ ಎಸ್. ಸೆಲ್ವ ಕುಮಾರ್

ಮೈಸೂರು: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸದೆ ವ್ಯರ್ಥ ವಾದರೆಆದರೆ ಸಂಬಂದಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ ಎಸ್. ಸೆಲ್ವ ಕುಮಾರ್ ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಸ್ ಶೆಲ್ಟರ್ ಗಳ ನಿರ್ಮಾಣ ಕಾಮಗಾರಿಗಳನ್ನು ಮಾಡಲು ಜಿಲ್ಲಾ ಪಂಚಾಯತ್ ಅನುದಾನದಲ್ಲಿ ಕ್ರಿಯಾ ಯೋಜನೆ ರೂಪಿಸಿಕೊಳ್ಳಿ, ಸಾಮಾಜಿಕ ಅರಣ್ಯ ಇಲಾಖೆಯ ವತಿಯಿಂದ ನರೇಗಾ ಯೋಜನೆಯಡಿ ರಸ್ತೆ ಬದಿ ಸಸಿಗಳನ್ನು ನೆಟ್ಟು ಪೋಷಣೆ ಮಾಡಬೇಕು. ನರೇಗಾ ಯೋಜನೆಯಡಿ ಶಾಲಾ ಕಾಂಪೌಂಡ್  ಹಾಗೂ ಶಾಲಾ ಮೈದಾನ ಗಳನ್ನು ಹೆಚ್ಚಿನ ಕಾಮಗಾರಿ ಕೈಗೊಳ್ಳಿ ಎಂದರು.

2021- 22 ನೆಯ ಸಾಲಿನಲ್ಲಿ ಶೇಕಡಾ 85 ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು ಉಳಿದ ಶೇಕಡಾ 15 ರಷ್ಟು ಕಾಮಗಾರಿಗಳು ಯಾಕೆ ಪೂರ್ಣಗೊಂಡಿಲ್ಲ. ಉಳಿದ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಲಿಂಕ್ ಡಾಕ್ಯುಮೆಂಟ್ ಯಡಿ ವಿವಿಧ ಇಲಾಖೆಗಳಯಡಿ ಕೈಗೊಂಡಿರುವ  ಕಾಮಗಾರಿಗಳನ್ನು ಈ ವರ್ಷದ ಆರ್ಥಿಕ ವರ್ಷದಲ್ಲಿಯೇ ಮುಗಿಸಬೇಕು. ಕಾಮಗಾರಿಗಳು ಪೂರ್ಣವಾಗಿದೆ ಹಣ ವಾಪಸ್ ಹೋದರೆ ಸಂಬಂದಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು.

ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಮಾತನಾಡಿ ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿಗಳು ಶಾಲಾ   ಮೈದಾನಗಳಲ್ಲಿ ಹಾಗೂ ಮೈದಾನಗಳಲ್ಲಿ ಗಿಡಗಳನ್ನು ನೆಟ್ಟು ಬಯೋ ಫೆನ್ಸಿಂಗ್ ಮಾಡಿ, ಇದರಿಂದ ನರೇಗಾ ಯೋಜನೆಯಡಿ ಹೆಚ್ಚಿನ ಮಾನವ ದಿನಗಳ ಪ್ರಗತಿ ಆಗುತ್ತದೆ. ಯಾವ ಯಾವ ಇಲಾಖೆಗಳು ಕಾಮಗಾರಿಗಳನ್ನು ವಿವಿಧ ಏಜೆನ್ಸಿ ಗಳಿಗೆ ನೀಡಲಾಗಿರುತ್ತದೆ ಆ ಇಲಾಖೆಯ ಅಧಿಕಾರಿಗಳು ಕಾಮಗಾರಿಗಳ ಗುಣಮಟ್ಟದಿಂದ ಪೂರ್ಣಗೊಂಡಿದೆಯೇ ಎಂಬುದನ್ನು ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಇಲ್ಲ. ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಕೊಳವೆ ಬಾವಿಗಳಲ್ಲಿ ಉತ್ತಮ ನೀರು ಇದೆ. ಮುಂದೆ ಕುಡಿಯುವ ನೀರಿನ ಸಮಸ್ಯೆ ಕಂಡು ಬರುವ ಗ್ರಾಮಗಳನ್ನು ಗುರುತಿಸಿದ್ದು,  ಸಮಸ್ಯೆ ಕಂಡುಬಂದರೆ ಖಾಸಗಿ ಬೋರ್ವೆಲ್ ಗಳನ್ನು ಬಾಡಿಗೆಗೆ ಪಡೆದು ಕುಡಿಯುವ ನೀರನ್ನು ಪೂರೈಸಲಾಗುವುದು. ಕೃಷಿ ಇಲಾಖೆಯ ವತಿಯಿಂದ ರೈತರಿಗೆ ಫ್ರೂಟ್ಸ್ ಐಡಿ ಕ್ರಿಯೇಟ್ ಮಾಡಲಾಗುತ್ತಿದೆ. ಬರ ಪರಿಹಾರ ಪಡೆಯಲು ಫ್ರೂಟ್ ಐಡಿ ಅತ್ಯವಶ್ಯಕವಾಗಿರುತ್ತದೆ. ಬೆಂಬಲ ಬೆಲೆ ಯೋಜನೆಯಡಿ ರಾಗಿ ಮತ್ತು ಭತ್ತ ವನ್ನು ಖರೀದಿ ಮಾಡಲಾಗುತ್ತಿದೆ. ಬೆಂಬಲ ಬೆಲೆ ಯೋಜನೆಯಡಿ 20 ಸಾವಿರ ರೈತರು ನೋಂದಣಿ ಆಗಿದ್ದಾರೆ ಎಂದರು.

ಯುನಾನಿ ಆಯುರ್ವೇದಿಕ್ ಚಿಕಿತ್ಸೆ  ನೀಡಲು ವಿಧ್ಯಾಭ್ಯಾಸ ಮಾಡಿರುವವರು ಅದಕ್ಕೆ ಸಂಬಂದಿಸಿದ ಚಿಕಿತ್ಸೆ ಮಾತ್ರ ನೀಡಬೇಕು. ಇಂಗ್ಲಿಷ್ ವೈದ್ಯ ಪದ್ಧತಿಯ ಚಿಕಿತ್ಸೆ ನೀಡುವುದು ಅಪರಾಧ. ಈ ಬಗ್ಗೆ ಪರಿಶೀಲನೆ ನಡೆಸಲು ಎಲ್ಲಾ ತಾಲ್ಲೂಕು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೆ ಪಿ ಎಂ ಇ ಆಕ್ಟ್ ಅಡಿ ಹಲವು ಕ್ಲಿನಿಕ್ ಗಳು ಅನುಮತಿ ಪಡೆಯದೇ ನಡೆಸುತ್ತಿದ್ದು ಕಂಡುಬಂದಿದೆ ಈ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಲು ಸೂಚನೆ ನೀಡಲಾಗಿದೆ. ಕೋವಿಡ್ -19 ಕುರಿತು ದಿನನಿತ್ಯ ಟೆಸ್ಟಿಂಗ್ ಗಳು ನಡೆಯುತ್ತಿದೆ. ಕೋವಿಡ್ ಪಾಸಿಟಿವ್ ಕಂಡುಬಂದರೆ ಚಿಕಿತ್ಸೆ ನೀಡಿ 7 ದಿನ ಐಸೋಲೇಶನ್ ಮಾಡಲಾಗುತ್ತಿದೆ. ಮುಂದೆ ಕೋವಿಡ್ ಹೆಚ್ಚಾದರೆ ಅಗತ್ಯ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡಗಳ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯ ವಸತಿ ಶಾಲೆಗಳಲ್ಲಿ  ವಿದ್ಯಾಭ್ಯಾಸ ಮಾಡುತ್ತಿರುವ ಎಸ್ ಎಸ್ ಎಲ್ ಸಿ ಮಕ್ಕಳು ಶೇಕಡಾ 100 ರಷ್ಟು ಉತೀರ್ಣರಾಗಬೇಕು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಎಸ್ ಎಸ್ಎಲ್ ಸಿ ಮಕ್ಕಳಿಗೆ ರೀಡಿಂಗ್ ರೂಂ ಗಳನ್ನು ತೆರೆಯುವಂತೆ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಕೆ.ಎಂ ಗಾಯತ್ರಿ ಅವರು ಮಾತನಾಡಿ ಶಿಕ್ಷಣ ಇಲಾಖೆಯ ವತಿಯಿಂದ ಒಟ್ಟು 37 ಲಕ್ಷದ 9 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಅಂಗನವಾಡಿಗಳ ದುರಸ್ಥಿ ಕಾರ್ಯಗಳನ್ನು ಹಾಗೂ ಗ್ರಂಥಾಲಯಗಳ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾ ಪಂಚಾಯತ್ ನ ಅನಿರ್ಬಂಧಿತ ಅನುದಾನದಲ್ಲಿ  ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸಂಪರ್ಕ ರಸ್ತೆಗಳು, ಶಾಲಾ ಕಾಂಪೌಂಡ್ ನಿರ್ಮಾಣ, ಅಂಗನವಾಡಿ ಕಟ್ಟಡಗಳ ದುರಸ್ಥಿ, ಡಿಜಿಟಲ್ ಲೈಬ್ರರಿ ಗಳ ನಿರ್ಮಾಣ, ಹಾಸ್ಟೆಲ್ ಗಳ ದುರಸ್ಥಿ  ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಕಾಮಗಾರಿ  ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಕೃಷ್ಣಂ ರಾಜು ಅವರು ಮಾತನಾಡಿ ಹಸರಿಕರಣ ಕಾಮಗಾರಿಗಳು, ತೋಟಗಾರಿಕೆ ಬೆಳೆಗಳಿಗೆ ಪ್ರೋತ್ಸಾಹ, ಶಾಲಾ ಆಟದ ಮೈದಾನ, ಘನ ತ್ಯಾಜ್ಯ ವಿಲೇವಾರಿ ಘಟಕ ಗಳ ನಿರ್ಮಾಣ, ಅಂಗನವಾಡಿ ಕಟ್ಟಡಗಳು, ಚರಂಡಿ ಕಾಮಗಾರಿಗಳು, ಸ್ಮಶಾನ ನಿರ್ಮಾಣ ಕಾಮಗಾರಿಗಳು  ಸೇರಿದಂತೆ 9000 ಸಾವಿರ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ನರೇಗಾ ಯೋಜನೆಯಡಿ ಮುಂದಿನ ವರ್ಷ 25 ಲಕ್ಷ ಮಾನವ ದಿನಗಳ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.

ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಸಭೆಗೆ ಮಾಹಿತಿ ನೀಡಿ ತೆಂಗು ಮಾವು ಬಾಳೆ ಬೆಳೆಗಳಿಗೆ ಉತ್ತೇಜನ ನೀಡಲು ಸಸಿಗಳನ್ನು ರೈತರಿಗೆ ನೀಡಿ ನರೇಗಾ ಯೋಜನೆಯಡಿ ಪ್ರೋತ್ಸಾಹ ನೀಡಲಾಗುತ್ತಿದೆ.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular