ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ನಗರದ ಹೊರವಲಯದ ಕುತ್ತಾರ್ ಮದನಿ ನಗರದಲ್ಲಿ ಕಾಂಪೌಂಡ್ ಗೋಡೆ ಕುಸಿದು ಮೃತಪಟ್ಟ ಕುಟುಂಬಕ್ಕೆ ಕರ್ನಾಟಕ ರಾಜ್ಯ ವಿಧಾನಸಭಾ ಸಭಾಧ್ಯಕ್ಷರು, ಉಳ್ಳಾಲ ಕ್ಷೇತ್ರದ ಶಾಸಕ ಯುಟಿ ಖಾದರ್ ಶಿಫಾರಸಿನ ಮೇರೆಗೆ ಕರ್ನಾಟಕ ಸರಕಾರದ ವತಿಯಿಂದ ಮೃತ ಯಾಸಿರ್ ರವರ ಮಗಳ ಕೈಯಲ್ಲಿ 20 ಲಕ್ಷ ಹಣದ ಚೆಕ್ಕನ್ನು ಮದನಿ ನಗರ ಮಸೀದಿಯಲ್ಲಿ ನೀಡಲಾಯಿತು.
ಈ ಸಂದರ್ಭದಲ್ಲಿ ಮದನಿ ನಗರ ಜುಮಾ ಮಸೀದಿಯ ಅಧ್ಯಕ್ಷರು ಮತ್ತು ಆಡಳಿತ ಸಮಿತಿಯ ಸದಸ್ಯರು ಹಾಗೂ ಮುನ್ನೂರು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.