Friday, April 11, 2025
Google search engine

Homeರಾಜ್ಯವಿಧಾನಸಭೆ ಕಲಾಪದಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನಕ್ಕೆ ಸಂತಾಪ

ವಿಧಾನಸಭೆ ಕಲಾಪದಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನಕ್ಕೆ ಸಂತಾಪ

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದಲ್ಲಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಲಾಗಿದೆ.

ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಅಗಲಿದ ನಾಯಕ ಎಸ್.ಎಂ.ಕೃಷ್ಣ ಅವರಿಗೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ನಾಳೆಯ ಕಲಾಪವನ್ನು ಗುರುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.

ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ತಮ್ಮಿಷ್ಟದ ಕಾಫಿ ಡೇ ಜಾಗದಲ್ಲೆ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

RELATED ARTICLES
- Advertisment -
Google search engine

Most Popular