ಮೈಸೂರು: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಆಯತಪ್ಪಿ ಬಿದ್ದು ನಿರ್ವಾಹಕ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಚಾಮರಾಜನಗರ ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (೩೫) ಮೃತ ನಿರ್ವಾಹಕ. ನಿರ್ವಾಹಕ ಮಹದೇವಸ್ವಾಮಿ ಕೆಎಸ್‌ಆರ್‌ಟಿಸಿ ಬಸ್‌ನ ಫುಟ್ ಬೋರ್ಡ್‌ನಲ್ಲಿ ನಿಂತಿದ್ದರು. ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಂಜನಗೂಡು ಡಿವೈಎಸ್‌ಪಿ ರಘು, ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.