ಮೈಸೂರು: ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀರಾಮ ಮಂದಿರದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ, ಮೈಸೂರು ಬ್ರಾಹ್ಮಣರ ಸಂಘ ಸಂಸ್ಥೆಗಳ ಒಕ್ಕೂಟ ಹಾಗೂ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ನೂತನ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರಿಗೆ ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಶಾಸಕರಾದ ಟಿ ಎಸ್ ಶ್ರೀವತ್ಸ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಂ ಡಿ ಗೋಪಿನಾಥ್, ಉಪಾಧ್ಯಕ್ಷರದ ಎಂ ಎನ್ ಸೌಮ್ಯ ಹಾಗೂ ಖಜಾಂಚಿ ಕೆ ನಾಗರಾಜ ನಿರ್ದೇಶಕ ಮಂಡಲಿ ಸದಸ್ಯರದ ಸಿ ವಿ ಪಾರ್ಥಸಾರಥಿ, ಪ್ರಶಾಂತ್ ತಾತಾಚಾರ್, ಹೆಚ್ ಎಸ್. ಬಾಲಕೃಷ್ಣ, ಎಂ ಆರ್. ಚೇತನ್, ಹೆಚ್ ಪಿ. ಪಣಿರಾಜ್, ವಿಕ್ರಂ ಅಯ್ಯಂಗಾರ್, ಎನ್,ಮಹಿಮ ಪಿ, ನಾಗಶ್ರೀ, ಕೆ ಎನ್ ಅರುಣ್, ಶಿವರುದ್ರಪ್ಪ, ರಾಜಮ್ಮ ಎಸ್. ಶಾಶ್ವತಿ ನಾಯಕ ಎಂ ಪಿ ಹಾಗೂ ಪ್ರಭಾರ ಕಾರ್ಯದರ್ಶಿ ಎನ್ ವೀಣಾ ಹಾಜರಿದ್ದರು.