ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರಿಗೆ ವಿಡಿಯೋ ಮಾಡಿಕೊಳ್ಳಲು ಕಾಂಗ್ರೆಸ್‌ನವರು ಹೇಳಿದ್ರಾ ಎಂದು ಪ್ರಶ್ನಿಸುವ ಮೂಲಕ ಸಚಿವ ಶಿವರಾಜ್ ತಂಗಡಗಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಕಿಡಿಕಾರಿದರು.
ನನ್ನ ವಿರುದ್ಧ ಕಾಂಗ್ರೆಸ್ ಪಿತೂರಿ ಮಾಡಿದೆ ಎಂಬ ಪ್ರಜ್ವಲ್ ರೇವಣ್ಣ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚನೆಯಾಗಿದೆ. ವಿದೇಶದಿಂದ ಬಂದು ಉತ್ತರ ಕೊಡಲಿ ಎಂದಿದ್ದಾರೆ.
ಈ ಸಂದರ್ಭದಲ್ಲಿ ಪರಿಷತ್ ಅಭ್ಯರ್ಥಿ ಆಯ್ಕೆ ಬಗ್ಗೆ ಪರಮೇಶ್ವರ್ ಅಸಮಾಧಾನಕ್ಕೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದ ಬಗ್ಗೆ ಸಿಎಂ ಮುಖ್ಯಮಂತ್ರಿ, ಡಿಸಿಎಂ ಡಿಕೆ ಶಿವಕುಮಾರ್ ಉತ್ತರ ಕೊಡುತ್ತಾರೆ. ನಮ್ಮ ವ್ಯಾಪ್ತಿಗೆ ಬರಲ್ಲ, ಅದೆಲ್ಲಾ ನನಗೆ ಮಾಹಿತಿ ಇಲ್ಲ ಎಂದರು.
ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಸಮಾಜಕ್ಕೆ ಒಂದು ಸ್ಥಾನ ನೀಡುವಂತೆ ಅಧ್ಯಕ್ಷರಿಗೆ ಮನವಿ ಮಾಡಿದ್ದೇವೆ. ಪಕ್ಷ ಅಧಿಕಾರಕ್ಕೆ ಬರಲು ನಮ್ಮ ಸಮುದಾಯದ ಪಾತ್ರವೂ ಇದೆ. ನಮ್ಮಲ್ಲಿ ಮೂರ್ನಾಲ್ಕು ಮಂದಿ ಆಕಾಂಕ್ಷಿಗಳಿದ್ದಾರೆ. ಯಾರನ್ನಾದರೂ ಒಬ್ಬರನ್ನ ಆಯ್ಕೆ ಮಾಡುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.