Monday, April 21, 2025
Google search engine

Homeರಾಜ್ಯಬಳ್ಳಾರಿಯಲ್ಲಿ ಶ್ರೀರಾಮುಲು ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿ ಇ ತುಕಾರಂ ಗೆಲುವು

ಬಳ್ಳಾರಿಯಲ್ಲಿ ಶ್ರೀರಾಮುಲು ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿ ಇ ತುಕಾರಂ ಗೆಲುವು

ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲುಗೆ ಭಾರಿ ಮುಖಭಂಗವಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಇ ತುಕಾರಂ ಭರ್ಜರಿ ಜಯ ಸಾಧಿಸಿದ್ದಾರೆ.

ಬಳ್ಳಾರಿಯಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಅವರಿಗೆ ಎದುರಾಳಿಯಾಗಿ ಕಾಂಗ್ರೆಸ್‌ ಇ ತುಕಾರಂ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಶ್ರೀರಾಮುಲುಗೆ ಸೋಲಾಗಿದ್ದು, ಇ. ತುಕಾರಂ ಗೆಲುವು ಸಾಧಿಸಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ ತುಕಾರಾಂ ಒಟ್ಟು 5,93,839 ಮತಗಳನ್ನು ಪಡೆದಿದ್ದು, 98,294 ಮತಗಳ ಅಂತರದಲ್ಲಿ ಬಿಜೆಪಿಯ ಬಿ ಶ್ರೀರಾಮುಲು ವಿರುದ್ಧ ಜಯ ಗಳಿಸಿದ್ದಾರೆ. ಇಲ್ಲಿ ಶ್ರೀರಾಮುಲು ಒಟ್ಟು 4,95,545 ಮತಗಳನ್ನು ಪಡೆದಿದ್ದಾರೆ.

ಬಳ್ಳಾರಿಯ ಸಂಡೂರು ಕ್ಷೇತ್ರದ ಶಾಸಕರಾಗಿದ್ದ ಇ ತುಕಾರಂ ಮೂಲತಃ ಬಳ್ಳಾರಿಯವರು. ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ವಸ್ತುವಾರಿ ಸಚಿವರೂ ಆಗಿದ್ದರು. ಈವರೆಗೆ ಬಳ್ಳಾರಿ ಲೋಕ ಕ್ಷೇತ್ರದಲ್ಲಿ ನಡೆದ ಒಟ್ಟು 19 ಚುನಾವಣೆಗಳಲ್ಲಿ 15 ಬಾರಿ ಕಾಂಗ್ರೆಸ್‌ ಗೆದಿದ್ದರೆ, 4 ಬಾರಿ ಬಿಜೆಪಿ ಗೆಲುವು ಸಾಧಿಸಿದೆ. ಇದೀಗ ಮತ್ತೆ ಕಾಂಗ್ರೆಸ್‌ ಗೆಲುವು ಸಾಧಿಸಿದೆ.

RELATED ARTICLES
- Advertisment -
Google search engine

Most Popular