ಮಂಡ್ಯ: ಬಿಜೆಪಿಯಿಂದ ಅಹೋರಾತ್ರಿ ಧರಣಿ ಅಂತ್ಯದ ಬೆನ್ನಲ್ಲೆ ಕಾಂಗ್ರೆಸ್ ಅಹೋರಾತ್ರಿ ಧರಣಿ ಅಂತ್ಯಗೊಳಿಸಲಾಗಿದೆ.
ಕಳೆದ 3 ದಿನಗಳಿಂದ ನಡೆಯುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಬೈಕ್ ರ್ಯಾಲಿ ಮಾಡುವ ಮೂಲಕ ಕಾಂಗ್ರೆಸ್ ಧರಣಿ ಅಂತ್ಯಗೊಳಿಸಿದೆ.
ಧರಣಿ ಸತ್ಯಾಗ್ರಹ ಸ್ಥಳ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಗಾಂಧಿ ಪ್ರತಿಮೆವರೆಗೆ ಬೈಕ್ ರ್ಯಾಲಿ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೆಲ ಕಾಲ ಗಾಂಧಿ ಪ್ರತಿಮೆ ಬಳಿ ಕುಳಿತು ಪ್ರತಿಭಟನೆ ನಡೆಸಿದರು.
ಈ ವೇಳೆ ಬಿಜೆಪಿಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಚಲುವರಾಯಸ್ವಾಮಿ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಷಡ್ಯಂತ್ರ ರಾಜಕಾರಣ ಮಾಡ್ತಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.