Monday, December 2, 2024
Google search engine

Homeರಾಜಕೀಯಕಾಂಗ್ರೆಸ್‌‍ ಪಳೆಯುಳಿಕೆ ಪಕ್ಷ, ಹಾಗೂ ಐರೆನ್‌ ಲೆಗ್‌ ಪಾರ್ಟಿ : ಜೆಡಿಎಸ್‌‍ ಟೀಕೆ

ಕಾಂಗ್ರೆಸ್‌‍ ಪಳೆಯುಳಿಕೆ ಪಕ್ಷ, ಹಾಗೂ ಐರೆನ್‌ ಲೆಗ್‌ ಪಾರ್ಟಿ : ಜೆಡಿಎಸ್‌‍ ಟೀಕೆ

ಬೆಂಗಳೂರು: ಕಾಂಗ್ರೆಸ್‌‍ ಪಕ್ಷವನ್ನು ಪಳೆಯುಳಿಕೆ ಪಕ್ಷ ಹಾಗೂ ಐರೆನ್‌ ಲೆಗ್‌ ಪಾರ್ಟಿ ಕಾಂಗ್ರೆಸ್‌‍ ಎಂದು ಜೆಡಿಎಸ್‌‍ ಟೀಕಿಸಿದೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌‍, ನಶಿಸುತ್ತಿರುವ ಶತಮಾನಗಳ ಪಳೆಯುಳಿಕೆ ಪಕ್ಷದ ಪಕಳೆಗಳು ದೇಶಾದ್ಯಂತ ಒಂದೊಂದೇ ಉದುರುತ್ತಿವೆ ಎಂದು ಆರೋಪಿಸಿದೆ.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌‍ ನೆಲಕಚ್ಚಿದೆ. ಅಲ್ಲಿ 6ನೇ ಸ್ಥಾನಕ್ಕೆ, ಜಾರ್ಖಂಡ್‌ ನಲ್ಲಿ 3ನೇ ಸ್ಥಾನಕ್ಕೆ ಕಾಂಗ್ರೆಸ್‌‍ ಜಾರಿದೆ. ಆದರೂ ಕರ್ನಾಟಕದಲ್ಲಿ ವಾಮಮಾರ್ಗದಲ್ಲಿ ಗೆದ್ದ 3 ವಿಧಾನಸಭಾ ಉಪ ಚುನಾವಣೆ ಕ್ಷೇತ್ರಗಳನ್ನು ಮುಖದ ಮೇಲಿಟ್ಟುಕೊಂಡು ಮೆರೆಯುತ್ತಿದೆ. ಮೆರೆಯಲಿ ಎಂದು ಲೇವಡಿ ಮಾಡಿದೆ.

ಮಹಾರಾಷ್ಟ್ರದಲ್ಲಿ ಮತದಾರರು ಕೈ ಪಕ್ಷದ ಪೋಸ್ಟ್‌ ಮಾರ್ಟಮ್‌ ಮಾಡಿದ್ದಾರೆ. ಕಾಂಗ್ರೆಸ್ಸಿಗರೇ, ಅನ್ಯರ ಬಗ್ಗೆ ಹಗುರವಾಗಿ ಮಾತಾನಾಡುವ ನಿಮ್ಮ ಹರಕು ಬಾಯಿಗಳಿಗೆ, ನಿಮ್ಮ ತೂತುಬಿದ್ದ ಮಡಿಕೆಯಂತಾಗಿರುವ ನಿಮ್ಮ ಪಕ್ಷಕ್ಕೆ ಮೊದಲು ತ್ಯಾಪೆ ಹಚ್ಚಿ. 288 ಸೀಟುಗಳ ಮಹಾರಾಷ್ಟ್ರದಲ್ಲಿ ಹದಿನಾರೇ ಸೀಟಿಗೆ ಬೋರಲು ಬಿದ್ದ ಸೋಕಾಲ್ಡ್ ರಾಷ್ಟ್ರೀಯ ಪಕ್ಷದ ನಾಯಕರೇ, ಇನ್ನೊಬ್ಬರ ಬಚ್ಚಲು ಮನೆ ಮೂಸಿ ನೋಡುವ ಚಟ ಬಿಡಿ ಎಂದು ಟೀಕಾಪ್ರಹಾರ ನಡೆಸಿದೆ.

ಇನ್ನು ಜಾರ್ಖಂಡ್‌ನಲ್ಲಿ ಜೆಎಂಎಂ ಪರಾವಲಂಬಿಯಾಗಿ ಪರದೇಸಿ ಬಾಳ್ವೆ ಮಾಡಿಕೊಂಡು 81 ಸೀಟಿನ ಪೈಕಿ ಹದಿನಾರಕ್ಕೆ ಅಡ್ಡಡ್ಡ ಬಿದ್ದ ನಿಮ್ಮ ಪಕ್ಷಕ್ಕೆ ಅಲ್ಲಿಯೂ ಜನ ಚಟ್ಟ ಕಟ್ಟಿದ್ದಾರೆ. ಸರಳ ಲೆಕ್ಕ ಕಾಂಗ್ರೆಸ್ಸಿಗರೇ, ಮಹಾರಾಷ್ಟ್ರದ 288, ಜಾರ್ಖಂಡ್‌ನ 81 ಸೇರಿ ಒಟ್ಟು 369. ಇಷ್ಟರಲ್ಲಿ ಒಟ್ಟು ಎಷ್ಟು ಗೆದ್ದಿದ್ದೀರಿ? ಕೇವಲ 32 ಕ್ಷೇತ್ರ ಮಾತ್ರ. ಅದರಲ್ಲಿಯೂ ಮಹಾರಾಷ್ಟ್ರದಲ್ಲಿ 28.ನಿಮಗಿಂತ ನಾವು ಕಳಪೆಯೇ? 224 ಕ್ಷೇತ್ರಗಳಲ್ಲಿ 19 ಗೆದ್ದಿದ್ದೆವು. ಅದೂ ಯಾವ ಮೈತ್ರಿಯೂ ಇಲ್ಲದೆ. ನಾವು ಪ್ರಾದೇಶಿಕ, ನೀವು ಸೋಕಾಲ್ಡ್ ನ್ಯಾಷನಲ್‌‍ ಎಂದು ಜೆಡಿಎಸ್‌‍ ಲೇವಡಿ ಮಾಡಿದೆ.

ಕಾಂಗ್ರೆಸ್‌‍, ಮಹಾರಾಷ್ಟ್ರದಲ್ಲಿ ಮೈತ್ರಿ ಪಕ್ಷಗಳನ್ನು ವ್ಯವಸ್ಥಿತವಾಗಿ ಮುಗಿಸಿದೆ. ಅದಕ್ಕೆ ಬಲಿಯಾದ ಪಕ್ಷ ಉದ್ಧವ್‌ ಠಾಕ್ರೆಯವರ ಶಿವಸೇನೆ. ಮೈತ್ರಿಗೆ, ಮೈತ್ರಿ ಪಕ್ಷಗಳಿಗೆ ಮಿತ್ರದ್ರೋಹ ಮಾಡುತ್ತಿರುವ ಕಾಂಗ್ರೆಸ್‌‍ ಸಂವಿಧಾನವನ್ನೇ ಅಣಕಿಸುತ್ತಿದೆ. ಅನ್ಯರ ಅಣಕವೇ ಮನೆಹಾಳು ಕಾಂಗ್ರೆಸ್ಸಿನ ಕಾಯಕ ಎಂದು ಟೀಕಿಸಿದೆ.

RELATED ARTICLES
- Advertisment -
Google search engine

Most Popular