Saturday, January 10, 2026
Google search engine

Homeರಾಜಕೀಯಹುಸಿ ಗ್ಯಾರಂಟಿಗಳ ಭಾರದಿಂದಲೇ ಕಾಂಗ್ರೆಸ್ ಸರ್ಕಾರ ಕುಸಿದು ಬೀಳುವುದು ನಿಶ್ಚಿತ: ಸುನಿಲ್ ಕುಮಾರ್

ಹುಸಿ ಗ್ಯಾರಂಟಿಗಳ ಭಾರದಿಂದಲೇ ಕಾಂಗ್ರೆಸ್ ಸರ್ಕಾರ ಕುಸಿದು ಬೀಳುವುದು ನಿಶ್ಚಿತ: ಸುನಿಲ್ ಕುಮಾರ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಆಡಳಿತದ ವೈಖರಿಯ ದಾರಿ ಮತ್ತು ಧಾಟಿಯನ್ನು ನೋಡಿದರೆ ಮುಂದಿನ ದಿನಗಳಲ್ಲಿ ತನ್ನ ಹುಸಿ ಗ್ಯಾರಂಟಿಗಳ ಭಾರದಿಂದಲೇ ಕುಸಿದು ಬೀಳುವುದು ನಿಶ್ಚಿತ. ಈ ಸಂಧರ್ಭದಲ್ಲಿ ರಾಜ್ಯ ಮತ್ತು ಜಿಲ್ಲೆಗಳಲ್ಲಿ ವೈಚಾರಿಕ ಬದ್ಧತೆಯ ಯುವಕರು ಬಿಜೆಪಿಯ ನೇತೃತ್ವವನ್ನು ವಹಿಸಿಕೊಳ್ಳುವುದು ಅಗತ್ಯ ಮತ್ತು ಅನಿವಾರ್ಯ ಎಂದು ಮಾಜಿ ಸಚಿವರೂ ಆಗಿರುವ ಕಾರ್ಕಳ ಬಿಜೆಪಿ ಶಾಸಕ ಸುನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಮುಂಬಾಗಿಲಿನಲ್ಲಿ ನಿಂತು ಎಲ್ಲರಿಗೂ ಉಚಿತ ವಿದ್ಯುತ್ ಅಂತ ಹೇಳಿ, ಹಿಂಬಾಗಿಲಿನಿಂದ ವಿದ್ಯುತ್ ಬೆಲೆಗಳನ್ನು ಗಗನಕ್ಕೆ ಏರಿಸಿರುವ ಎಟಿಎಂ ಸರ್ಕಾರದ ತಂತ್ರ ಬಯಲಾಗಿದೆ. ಸಿದ್ದರಾಮಯ್ಯನವರೇ ಇದೀಗ ತಮ್ಮದೇ ಪಕ್ಷದ ಮತ್ತೋರ್ವ ಶಾಸಕ ತನ್ವೀರ್ ಸೇಠ್ ಅವರು ನಿಮಗೆ ಪತ್ರಬರೆದು ನೀವು ಮಾಡುತ್ತಿರುವುದು ತಪ್ಪು ಎಂದು ಹೇಳಿದರೂ, ಅದನ್ನು ಲೆಕ್ಕಿಸದಿರುವಷ್ಟು ಭಂಡರಾಗಿದ್ದೀರ? ತಮ್ಮ ಭಂಡತನದಿಂದ ರಾಜ್ಯಕ್ಕೆ ಕೆಡಕಾಗುತ್ತಿದೆ ನೆನಪಿರಲಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.

RELATED ARTICLES
- Advertisment -
Google search engine

Most Popular