ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣ ದುರ್ಬಲವಾಗಿದೆ. ಮುಡಾ ಹಗರಣದಲ್ಲಿ ಭಾಗಿಯಾಗಿರುವಂತ ಸಿಎಂ ಸಿದ್ಧರಾಮಯ್ಯ ಅವರನ್ನು ಕುರ್ಚಿಯಿಂದ ಕೆಳಗಿಳಿಸಲು ವಿಫಲವಾಗಿದೆ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪ ಮಾಡಿದರು.
ಇಂದು ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಕಾಂಗ್ರೆಸ್ಸಿಗರು ಮತ್ತು ಸಿದ್ದರಾಮಯ್ಯನವರು ಕರ್ನಾಟಕವನ್ನು ಎಟಿಎಂ ಮಾಡಿ ತಮ್ಮನ್ನು ತಾವು ಹಾಳು ಮಾಡಿಕೊಂಡರು ಎಂದು ನುಡಿದರು. ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಮೂಲಕ ರಾಷ್ಟ್ರದಲ್ಲಿ ಕರ್ನಾಟಕದ ಮಾನವನ್ನು ಹರಾಜು ಹಾಕುತ್ತಿದೆ ಎಂದು ಟೀಕಿಸಿದರು.
ರಾಜೀನಾಮೆ ಕೊಡುವ ಮೂಲಕ ಅಲ್ಪಸ್ವಲ್ವ ಗೌರವವನ್ನು ಉಳಿಸಿಕೊಳ್ಳಿ ಎಂದು ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು. ಮೊನ್ನೆ ಹೈಕೋರ್ಟ್ ಆದೇಶ ಬಂದ ಕೂಡಲೇ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನಿಮ್ಮ ರಾಜೀನಾಮೆ ಪಡೆದು ಪಕ್ಷದಿಂದ ಉಚ್ಚಾಟಿಸಬೇಕಿತ್ತು. ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣ ದುರ್ಬಲ ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ತಿಳಿಸಿದರು.
ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಮೂಡ ಸೈಟ್‌ಗಳನ್ನು ಕೊಳ್ಳೆ ಹೊಡೆದ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಸಿದ್ದರಾಮಯ್ಯ ಅವರೇ ಕೊಡಲೇಬೇಕು ಕೊಡಲೇಬೇಕು- ರಾಜೀನಾಮೆ ಕೊಡಲೇಬೇಕು, ಭ್ರಷ್ಟ ಸರಕಾರ ನಡೆಸುವ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಬೆಲೆ ಏರಿಕೆ, ತೆರಿಗೆ ಏರಿಕೆ ಸಿಎಂ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ- ಇವೇ ಮೊದಲಾದ ಘೋಷಣೆಗಳನ್ನು ಕೂಗಿದರು.