Monday, April 21, 2025
Google search engine

Homeರಾಜ್ಯಬಿಜೆಪಿ-ಜೆಡಿಎಸ್ ಪಕ್ಷಗಳ ಮೈತ್ರಿಗೆ ಹುಳಿ ಹಿಂಡುವ ಕೆಲಸ ಕಾಂಗ್ರೆಸ್ ಮಾಡುತ್ತಿಲ್ಲ: ಸಚಿವ ಎನ್.ಚಲುವರಾಯಸ್ವಾಮಿ

ಬಿಜೆಪಿ-ಜೆಡಿಎಸ್ ಪಕ್ಷಗಳ ಮೈತ್ರಿಗೆ ಹುಳಿ ಹಿಂಡುವ ಕೆಲಸ ಕಾಂಗ್ರೆಸ್ ಮಾಡುತ್ತಿಲ್ಲ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿಗೆ ಹುಳಿ ಹಿಂಡುವ ಕೆಲಸ ಕಾಂಗ್ರೆಸ್ ಮಾಡುತ್ತಿಲ್ಲ. ಆ ಪಕ್ಷಗಳ ನಾಯಕರು ಕಿವಿಯಲ್ಲಿ ಹೂವು ಇಟ್ಟುಕೊಂಡಿದ್ದಾರೆಯೇ ಅಥವಾ ಎರಡು ಪಕ್ಷಗಳ ಮೈತ್ರಿ ಅಷ್ಟು ದುರ್ಬಲವೇ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರಿಗೆ ಜೆಡಿಎಸ್ ಪಕ್ಷದ ಟಿಕೆಟ್ ನೀಡುವ ಸಾಧ್ಯತೆಯಿದೆ ಎಂದರು.

ಯೋಗೇಶ್ವರ್ ಅಲ್ಲದೆ, ಕುಮಾರಸ್ವಾಮಿಯವರ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಇಲ್ಲವೇ ಒಕ್ಕಲಿಗ ಮುಖಂಡ ಜಯಮೂರ್ತಿಗೆ ಟಿಕೆಟ್ ಗಿಟ್ಟಿಸಬಹುದಾಗಿದೆ ಎಂದು ಅವರು ತಿಳಿಸಿದರು.

RELATED ARTICLES
- Advertisment -
Google search engine

Most Popular