ಮಂಗಳೂರು (ದಕ್ಷಿಣ ಕನ್ನಡ): ಕೂಡಲೇ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಇವರನ್ನ ಬಂಧಿಸಬೇಕು ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.
ಮಂಗಳೂರಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು. ಏಕೆಂದರೆ, ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಆಗಬಹುದು ಎಂಬ ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್ ರ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದರು. ಒಂದು ಕಡೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ನಮಗೆ ಯಾವುದೇ ಮಾಹಿತಿ ಇಲ್ಲ ಅಂತ ಹೇಳ್ತಾರೆ. ಉಪಮುಖ್ಯಮಂತ್ರಿಗಳು ಪರಿಶೀಲನೆ ಮಾಡುತ್ತಾರೆ ಅಂತ ಹೇಳುತ್ತಾರೆ. ಕೂಡಲೇ ಹರಿಪ್ರಸಾದ್ ಅವರು ತಮಗೆ ಇದ್ದ ಮಾಹಿತಿಯನ್ನು ಗೃಹ ಇಲಾಖೆಗೆ ನೀಡಬೇಕು ಅಥವಾ ಇವರನ್ನು ಬಂಧಿಸಬೇಕೆಂದು ಆಗ್ರಹಿಸಿದರು.
ಗೋದ್ರಾ ಘಟನೆ ಹಿಂದೆ ಕಾಂಗ್ರೆಸ್ ಕೂಡ ಇತ್ತು. ಅಂದು ಮೋದಿ ಸರ್ಕಾರವನ್ನ ಬೀಳಿಸಲು ಕಾಂಗ್ರೆಸ್ ಕೂಡ ಷಡ್ಯಂತ್ರ ಮಾಡಿತ್ತು ಎಂದು ನಳೀನ್ ಆರೋಪಿಸಿದ್ದಾರೆ.