Thursday, April 3, 2025
Google search engine

Homeದೇಶಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ರಾಷ್ಟ್ರ ರಾಜಧಾನಿ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರದಿಂದ ಅವರು ಬಳಲುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ತಜ್ಞ ವೈದ್ಯರು ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

”ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ತಂಡ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದೆ” ಎಂದು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಈ ಹಿಂದೆ ಸೋನಿಯಾ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ನಂತರದ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಎರಡು ಬಾರಿ ಸೋಂಕು ದೃಢಪಟ್ಟಿತ್ತು. ಇತ್ತೀಚೆಗೆ ಮುಂಬೈನಲ್ಲಿ ನಡೆದ ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಪಾಲ್ಗೊಂಡಿದ್ದರು. ಇದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು.

RELATED ARTICLES
- Advertisment -
Google search engine

Most Popular