ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಕಾಂಗ್ರೆಸ್ ಅಬ್ಬರದ ಪ್ರಚಾರ ನಡೆಸುತ್ತಿದ್ದು, ಮದ್ದೂರು-ಮಂಡ್ಯದಲ್ಲಿ ವಿಧಾನಸಭಾ ಕ್ಷೇತ್ರ ಸಿಲ್ವರ್ ಜ್ಯೂಬಲಿ ಪಾರ್ಕ್ ನಲ್ಲಿ ಕಾರ್ಯಕರ್ತರ ಸಭೆ ನಡೆಯುತ್ತಿದೆ.
ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಪ್ರಚಾರ ಸಭೆ ಹಮ್ಮಿಕೊಂಡಿದ್ದು, ಚುನಾವಣಾ ಪ್ರಚಾರ ಸಭೆಗೆ ದೀಪಬೆಳಗುವ ಮೂಲಕ ಚಾಲನೆ ನೀಡಿದರು.
ಸಭೆಯಲ್ಲಿ ಅಭ್ಯರ್ಥಿ ವೆಂಕಟರಮಣೇಗೌಡ@ ಸ್ಟಾರ್ ಚಂದ್ರು, ಶಾಸಕ ಗಣಿಗ ರವಿಕುಮಾರ್, ರಮೇಶ್ ಬಾಬು ಬಂಡಿಸಿದ್ದೇಗೌಡ, MLC ದಿನೇಶ್ ಗೂಳಿಗೌಡ, ಮಾಜಿ ಸಚಿವ ಆತ್ಮಾನಂದ, ಸೇರಿ ಹಿರಿಯ ಕಾಂಗ್ರೆಸ್ ನಾಯಕರು, ಮುಖಂಡರು ಭಾಗಿಯಾಗಿದ್ದರು.
ಮೊನ್ನೆಯಷ್ಟೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮರಿತಿಬ್ಬೇಗೌಡ, ಮಾಜಿ ಶಾಸಕ ಎಂ.ಶ್ರೀನಿವಾಸ್ ಅಳಿಯ ಹೆಚ್.ಎನ್.ಯೋಗೇಶ್, ಸೇರಿ ಹಲವರು ಭಾಗಿಯಾಗಿದ್ದರು.
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ನಮ್ಮ ನಾಯಕರು ನನ್ನ ಅಭ್ಯರ್ಥಿಯಾಗಿ ಮಾಡಿದ್ದಾರೆ. ಎಲ್ಲರು ಸಹ ಆಶೀರ್ವಾದ ಮಾಡಬೇಕು. ಮಂಡ್ಯ ಜಿಲ್ಲೆಯನ್ನ ಮಾದರಿ ಜಿಲ್ಲೆಯನ್ನಾಗಿ ಮಾಡ್ತೇನೆ. ನಿಮ್ಮ ಸೇವೆ ಮಾಡಲು ನನಗೆ ಅವಕಾಶ ಕೊಡಿ.ಆಶೀರ್ವದಿಸಿ ಎಂದರು.