ಮಂಗಳೂರು (ದಕ್ಷಿಣ ಕನ್ನಡ): ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟವಾಗಿ 24 ಸ್ಥಾನಗಳನ್ನು ಪಡೆಯಲಿದೆ. ಪಕ್ಷದ ಆಂತರಿಕ ಸಮೀಕ್ಷೆಯ ಪ್ರಕಾರ ದೇಶದಲ್ಲಿಯೂ ಇಂಡಿಯಾ ಮೈತ್ರಿಕೂಟ ಉತ್ತಮ ಫಲಿತಾಂಶ ಪಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್‌ನ ಸದಸ್ಯ ಡಾ. ಮಂಜುನಾಥ ಭಂಡಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಕ್ಷದ ಆತಂರಿಕ ಸಮೀಕ್ಷೆಯ ಲೆಕ್ಕಾಚಾರದ ಕುರಿತು ಮಾಹಿತಿ ನೀಡಿದರು.