ಮಂಗಳೂರು (ದಕ್ಷಿಣ ಕನ್ನಡ): ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದಶಿಯಾಗಿದ್ದು, ತಮಿಳುನಾಡು ಹಾಗೂ ಗೋವಾದ ಉಸ್ತುವಾರಿ ವಹಿಸಿದ್ದ ಸಂದರ್ಭದಲ್ಲಿ ಸಿ.ಟಿ. ರವಿಯವರು ಕಪ್ಪ ಪಡೆದ ನೆನಪಿನಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ರಣದೀಪ್ ಸಿಂಗ್ ಸುರ್ಜೇವಾರನ್ನು ಲೇವಡಿ ಮಾಡುವ ದಾಟಿಯಲ್ಲಿ ಮಾತನಾಡಿದ್ದಾರೆಯೇ ಎಂದು ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಪ್ರಶ್ನಿಸಿದ್ದಾರೆ.
ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರೋ ಜಿಲ್ಲಾ ಕಾಂಗ್ರೆಸ್‌ನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಧರ್ಮೇಂದ್ರ ಪ್ರದಾನ್, ರಾಧಾ ಮೋಹನ್‌ರವರು ಕರ್ನಾಟಕಕ್ಕೆ ಆಗಾಗ್ಗೆ ಬರುತ್ತಿರುತ್ತಾರೆ. ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಯಲು ಅವರು ಬರುತ್ತಿರಬಹುದು. ಆದರೆ ಸಿಟಿಯವರ ಹೇಳಿಕೆ ನೋಡಿದರೆ, ಬಿಜೆಪಿಯ ಆ ನಾಯಕರು ಕೂಡಾ ಕಪ್ಪ ಸ್ವೀಕರಿಸಲು ಬರುತ್ತಾರೆಯೇ ಎಂಬ ಸಂಶಯ ಮೂಡುತ್ತದೆ ಎಂದರು.