Saturday, April 12, 2025
Google search engine

Homeರಾಜ್ಯಮಾದರಿ ನೀತಿಸಂಹಿತೆ ಉಲ್ಲಂಘಿಸಿದ ಕಾಂಗ್ರೆಸ್: ಸಿ.ಟಿ.ರವಿ

ಮಾದರಿ ನೀತಿಸಂಹಿತೆ ಉಲ್ಲಂಘಿಸಿದ ಕಾಂಗ್ರೆಸ್: ಸಿ.ಟಿ.ರವಿ

ಬೆಂಗಳೂರು: ಕಾಂಗ್ರೆಸ್ಸಿನವರು ಮಾದರಿ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆರೋಪಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜಾಹೀರಾತು ಕೊಟ್ಟು ಮಾದರಿ ನೀತಿಸಂಹಿತೆ ಉಲ್ಲಂಘಿಸಿದ ಮುಖ್ಯಮಂತ್ರಿಗಳು, ಅವರ ಸಂಪುಟದ ಸಚಿವರ ನೀತಿ ಸಂವಿಧಾನಬಾಹಿರ. ಆದ್ದರಿಂದ ಚುನಾವಣಾ ಆಯೋಗವು ಈ ವಿಷಯದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ 3 ಉಪ ಚುನಾವಣೆಗಳು ನಡೆಯುತ್ತಿವೆ. ನೀತಿ ಸಂಹಿತೆಯೂ ಜಾರಿಯಲ್ಲಿದೆ. ಅವರಿಗೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣಗಳಿಂದ ಪಾರಾಗುವ ಭಯ ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ.

ಅದರಿಂದ ರಕ್ಷಣೆ ಪಡೆಯಲು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ರಾಯಚೂರು ವಿಶ್ವವಿದ್ಯಾಲಯಕ್ಕೆ ನಾವು ಮಹರ್ಷಿ ವಾಲ್ಮೀಕಿ ಹೆಸರು ಇಡುವುದಾಗಿ ಹೇಳಿದ್ದಾರೆ ಎಂದು ಆಕ್ಷೇಪಿಸಿದರು. ಇದೀಗ ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದಾರೆ. ಹಿಂದಿನ ಅವಧಿಯಲ್ಲಿ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ಇಡಬೇಕೆಂದು ಇವರಿಗೆ ಜ್ಞಾನೋದಯ ಆಗಿರಲಿಲ್ಲ ಎಂದು ವ್ಯಂಗ್ಯವಾಡಿದರು. ಈಗ ಆ ಸಮುದಾಯದ ಮತಗಳು ಕೈತಪ್ಪುವ ಭೀತಿ ಕಾಡುತ್ತಿದೆ. ಆ ಭೀತಿಯಿಂದ ಮಹರ್ಷಿ ವಾಲ್ಮೀಕಿ ಹೆಸರು ಇಡುವುದಾಗಿ ಹೇಳಿದ್ದಾರೆ ಎಂದು ಟೀಕಿಸಿದರು. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಲೂಟಿ ಹೊಡೆದಿದ್ದೀರಲ್ಲಾ ಅದಕ್ಕೆ ಮೊದಲು ಪ್ರಾಯಶ್ಚಿತ್ತ ಮಾಡಿಕೊಳ್ಳಿ ಎಂದು ಆಗ್ರಹಿಸಿದರು.

RELATED ARTICLES
- Advertisment -
Google search engine

Most Popular