Saturday, April 19, 2025
Google search engine

Homeಅಪರಾಧವಿಧ್ವಂಸಕ ಕೃತ್ಯಕ್ಕೆ ಸಂಚು: ಐವರು ಶಂಕಿತ ಉಗ್ರರ ಬಂಧನ

ವಿಧ್ವಂಸಕ ಕೃತ್ಯಕ್ಕೆ ಸಂಚು: ಐವರು ಶಂಕಿತ ಉಗ್ರರ ಬಂಧನ

ಬೆಂಗಳೂರು: ಕರ್ನಾಟಕದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಉಗ್ರರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಯ್ಯದ್ ಸುಹೇಲ್, ಜಾಹಿದ್​, ಉಮರ್, ಜುನೇದ್, ಮುದಾಶೀರ್ ಬಂಧಿತ ಶಂಕಿತ ಉಗ್ರ ರು. ಐವರು ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎನ್ನಲಾಗಿದೆ. 2017ರಲ್ಲಿ ಬೆಂಗಳೂರಿನ ಆರ್.ಟಿ.ನಗರದಲ್ಲಿ ನಡೆದಿದ್ದ ಮೂವರ ಕಿಡ್ನ್ಯಾಪ್, ಓರ್ವನ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಹಲವು ಆರೋಪಿಗಳು, ಪರಪ್ಪನ ಅಗ್ರಹಾರ ಜೈಲಿನಿಂದ ಉಗ್ರರ ಜೊತೆಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ.
ಐವರು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಿಧ್ವಂಸಕ ಕೃತ್ಯಕ್ಕೆ ತಯಾರಿ ನಡೆಸಿದ್ದರು. ಇದಕ್ಕೆ ಬೇಕಾಗುವ ಕಚ್ಚಾ ವಸ್ತುಗಳನ್ನು ಒಗ್ಗೂಡಿಸುತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ಕೇಂದ್ರ, ಸಿಸಿಬಿ ಮಾಹಿತಿ ಸಂಗ್ರಹ ಮಾಡಿತ್ತು. ಮಾಹಿತಿ ಅನ್ವಯ ಸಿಸಿಬಿ ಜೊತೆಗೆ ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿ ವಿಚಾರಣೆ ನಡೆಸಿದೆ.

RELATED ARTICLES
- Advertisment -
Google search engine

Most Popular