ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ನಿಯಮಿತ(ಸೆಸ್ಕ್)ದ ಕಚೇರಿಯಲ್ಲಿ ಮಂಗಳವಾರ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.
ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹಾಗೂ ಭಾರತದ ಸಂವಿಧಾನದ ಪ್ರಸ್ತಾವನೆಗೆ ಪುಷ್ಪನಮನ ಸಲ್ಲಿಸಿದರು.
ಇದೇ ವೇಳೆ ಭಾರತದ ಸಂವಿಧಾನ ಪೀಠಿಕೆಯನ್ನು ಬೋಧಿಸಿ, ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.