Monday, April 21, 2025
Google search engine

Homeರಾಜ್ಯಸುದ್ದಿಜಾಲವಸ್ತುಗಳನ್ನು ಖರೀದಿಸುವ ಮುನ್ನ ಗ್ರಾಹಕರು ಎಚ್ಚರವಹಿಸಿ: ಎಚ್. ಚನ್ನೇಗೌಡ

ವಸ್ತುಗಳನ್ನು ಖರೀದಿಸುವ ಮುನ್ನ ಗ್ರಾಹಕರು ಎಚ್ಚರವಹಿಸಿ: ಎಚ್. ಚನ್ನೇಗೌಡ

ರಾಮನಗರ: ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಆ ವಸ್ತುವಿನ ಎಂ.ಆರ್.ಪಿ, ಪ್ರಮಾಣ, ದಿನಾಂಕ ಇವುಗಳ ಬಗ್ಗೆ ಗಮನಹರಿಸುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಎಚ್. ಚನ್ನೆಗೌಡ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕನಕಪುರದ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ೨೦೨೩ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಹಕರಿಗೆ ಜಾಗೃತಿ ಮೂಡಿಸಲು ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಪ್ಯಾಕೇಜ್ ಗುಣಮಟ್ಟವನ್ನು ಗ್ರಾಹಕರು ಪರಿಶೀಲಿಸಬೇಕು. ಪ್ಯಾಕೇಜ್ ಒಳಗಿನ ಪದಾರ್ಥಗಳ ವಿವರಗಳನ್ನು ಆ ಪ್ಯಾಕೇಜ್ ಮೇಲೆ ಮುದ್ರಿಸಿರಬೇಕು. ಗ್ರಾಹಕರು ತಾವು ಖರೀದಿಸಿರುವ ವಸ್ತುವಿನಲ್ಲಿ ಗುಣಮಟ್ಟವಿಲ್ಲದಿದ್ದಲ್ಲಿ ಗ್ರಾಹಕರ ನ್ಯಾಯಾಲಯಕ್ಕೆ ಹೋಗಬಹುದು ಎಂದರು. ಗ್ರಾಹಕರು ಖರೀದಿಸಿದ ವಸ್ತುವಿನಲ್ಲಿ ಅನ್ಯಾಯ ಕಂಡುಬಂದಲ್ಲಿ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಗ್ರಾಹಕರ ನ್ಯಾಯಾಲಯಗಳಿವೆ ಅಲ್ಲಿ ಅರ್ಜಿ ಸಲ್ಲಿಸಿ ಪರಿಹಾರವನ್ನು ಪಡೆದುಕೊಳ್ಳಬಹುದು. ಗ್ರಾಹಕರ ಸೇವೆಯಲ್ಲಿ ದಕ್ಕೆ ಉಂಟಾದಾಗ ಆ ವ್ಯಕ್ತಿಗೆ ಕಾನೂನು ಸೇವೆಯನ್ನು ಉಚಿತವಾಗಿ ಪಡೆಯಬಹುದು ಎಂದು ತಿಳಿಸಿದರು.

ಗ್ರಾಹಕರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಗಟ್ಟಬೇಕು. ನಾವು ಡಿಜಿಟಲ್ ಯುಗಕ್ಕೆ ಕಾಲಿಟ್ಟಿದ್ದೇವೆ. ಗ್ರಾಹಕರಿಗೆ ವಸ್ತುವನ್ನು ಗುಣಮಟ್ಟದಲ್ಲಿ ಸುರಕ್ಷತೆ ನೀಡಬೇಕು. ಗ್ರಾಹಕರು ವಸ್ತುವಿನ ಗುಣಮಟ್ಟವನ್ನು ಪರಿಶೀಲಿಸಿ ಖರೀದಿಸಬೇಕು ಎಂದರು. ಗ್ರಾಹಕರು ಖರೀದಿಸುವ ವಸ್ತುಗಳ ಕುರಿತು ಜಾಹೀರಾತುಗಳು ನೀಡುವಾಗ ಎಚ್ಚರಿಕೆಯಿಂದ ನೀಡಬೇಕು. ಇದರಲ್ಲಿ ಸಮಸ್ಯೆ ಕಂಡು ಬಂದರೆ ಕಾನೂನು ರೀತಿಯ ಶಿಕ್ಷೆ ವಿಧಿಸಲಾಗುತ್ತದೆ. ಇಂತಹ ಜಾಹೀರಾತಿನಿಂದ ಗ್ರಾಹಕರಿಗೆ, ಸಾರ್ವಜನಿಕರಿಗೆ ಹಾನಿ ಅಥವಾ ದುಷ್ಪರಿಣಾಮಗಳು ಉಂಟಾಗುತ್ತದೆಯೇ ಎಂಬುದನ್ನು ಪರಿಶೀಲಿಸಿ ಮಾಲೀಕರು ಜಾಹೀರಾತು ನೀಡಬೇಕು ಎಂದು ತಿಳಿಸಿದರು. ಬೆಂಗಳೂರು ಗ್ರಾಹಕರ ಮಾಹಿತಿ ಕೇಂದ್ರದ ಕ್ರಿಯೇಟ್ ಸಂಸ್ಥೆಯ ಅಧ್ಯಕ್ಷರಾದ ವೈ.ಜಿ ಮುರುಳೀಧರನ್ ಅವರು ಇ-ಕಾಮರ್ಸ್ ಮತ್ತು ಡಿಜಿಟಲ್ ವ್ಯಾಪಾರದ ಯುಗದಲ್ಲಿ ಗ್ರಾಹಕರ ರಕ್ಷಣೆ ಕುರಿತು ಅರಿವು ಮೂಡಿಸಿದರು.

ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ವೈ.ಎಸ್. ತಮ್ಮಣ್ಣ, ಮಹಿಳಾ ಸದಸ್ಯರಾದ ರೇಣುಕಾದೇವಿ ದೇಶಪಾಂಡೆ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಿ.ಆರ್. ರಮ್ಯ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ಲೋಕೇಶ್, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಅಧ್ಯಕ್ಷರು ಹಾಗೂ ಜಿಲ್ಲಾ ಗ್ರಾಹಕ ರಕ್ಷಣಾ ಪರಿಷತ್‌ನ ಸದಸ್ಯರಾದ ಡಾ. ಕೆ.ಎಸ್. ಮಂಜುನಾಥ್, ಜಿಲ್ಲಾ ಗ್ರಾಹಕ ರಕ್ಷಣಾ ಪರಿಷತ್‌ನ ಸದಸ್ಯರಾದ ಚಂದ್ರಯ್ಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶೈಲಜ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular