ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿರಂತರವಾಗಿ ಹಮ್ಮಿಕೊಳ್ಳಲಾಗಿದ್ದ 57 ಕಣ್ಣಿನ ತಪಾಸಣಾ ಶಿಬಿರ ಯಶಸ್ವಿಯಾಗಿದೆ ಎಂದು ರಾಜ್ಯ ಒಬಿಸಿ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್ ತಿಳಿಸಿದರು.
ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆ ಜನ ಧ್ವನಿ ಬಿ ವೆಂಕಟೇಶ್ ಅಭಿಮಾನಿ ಬಳಗ ಹಾಗೂ ಬಿಜೆಪಿ ಒಬಿಸಿ ಮೋರ್ಚಾ ವತಿಯಿಂದ ಆಯೋಜಿಸಲಾಗಿದ್ದ ಕಣ್ಣಿನ ತಪಾಸಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹನೂರು ವಿಧಾನಸಭಾ ಕ್ಷೇತ್ರದ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಇದುವರೆಗೂ ಉಚಿತ 57 ಕಣ್ಣಿನ ತಪಾಸಣಾ ಶಿಬಿರವನ್ನು ನಡೆಸಲಾಗಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ಈ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಂಡಿದ್ದು 4000ಕ್ಕೂ ಹೆಚ್ಚು ಜನರಿಗೆ ಕಣ್ಣಿನ ಆಪರೇಷನ್ ಮಾಡಲಾಗಿದೆ. ಇವರುಗಳೆಲ್ಲ ಆರೋಗ್ಯವಂತರಾಗಿದ್ದು, ತಪಾಸಣಾ ಶಿಬಿರಗಳಲ್ಲಿ ಬಂದು ವೈದ್ಯರುಗಳ ಸಲಹೆ ಪಡೆದುಕೊಳ್ಳುತ್ತಿದ್ದಾರೆ.
ಮುಂದಿನ ತಿಂಗಳಿನಲ್ಲಿ ಕಾಡಂಚಿನ ಹೂಗ್ಯಂ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ರಾಮಪುರ, ಕೌದಳ್ಳಿ ಮಾರ್ಟಳ್ಳಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಸಾರ್ವಜನಿಕರು ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ಪ್ರತಿಯೊಬ್ಬರು ಆರೋಗ್ಯವಂತರಾಗಿರಲು ಹಾಗೂ ಕಣ್ಣಿನ ರಕ್ಷಣೆ ಮಾಡಿಕೊಳ್ಳಲು ದೃಷ್ಟಿಯನ್ನು ವೃದ್ಧಿಸಬಲ್ಲ ಆಹಾರ ಪದಾರ್ಥಗಳು ,ತರಕಾರಿ ಸೇವನೆ ಮಾಡುವುದರ ಮೂಲಕ ಕಣ್ಣಿನ ರಕ್ಷಣೆ ಹಾಗೂ ಆರೋಗ್ಯದ ಕಡೆ ಹೆಚ್ಚಿನ ಒತ್ತು ನೀಡಬೇಕೆಂದು ಸಲಹೆ ನೀಡಿದರು.
ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯರುಗಳಾದ ಶ್ರೀಕಂಠ ಮೂರ್ತಿ, ಶಂಕೇಶ್ ಮನೋಲಿ, ಜನಧ್ವನಿ ಬಿ ವೆಂಕಟೇಶ್ ಕಚೇರಿ ಸಿಬ್ಬಂದಿಗಳಾದ ಲೋಕೇಶ್ ಜತ್ತಿ, ರಾಮಚರಣ್, ಅಪ್ಪು, ಚಿರಂಜೀವಿ, ತೆಳ್ಳನೂರು ವಿಜಿ ಹೊಂಡರಬಾಳು ರಾಜು ಸೇರಿದಂತೆ ಇನ್ನಿತರ ಹಾಜರಿದ್ದರು.