ಮಂಗಳೂರು (ದಕ್ಷಿಣ ಕನ್ನಡ): ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಶಿರಾಡಿ ಘಾಟಿಯ ಕೆಂಪುಹೊಳೆ ಬಳಿ ನಡೆದಿದೆ.
ಹಾಸನ ನಿವಾಸಿ ಚಂದ್ರೇಗೌಡ (50) ಮೃತ ವ್ಯಕ್ತಿ. ಅದೇ ಕಾರಿನಲ್ಲಿದ್ದ ಚಿನ್ನೇಗೌಡ (31) ಹಾಗೂ ಶೀಲಾ (40) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು ಕಡೆಯಿಂದ ಹಾಸನ ಕಡೆಗೆ ಹೋಗುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ರಸ್ತೆಯಲ್ಲೇ ತಿರುಗಿದ ಕಾರು ಅದರ ಹಿಂದಿದ್ದ ಹಾಸನದ ಕಡೆ ಹೋಗುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ.
ಇನ್ನೊಂದು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ