ಕೋಲಾರ : ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮಕ್ಕಳು ಅಸ್ವಸ್ಥಗೊಂಡಿರುವ ಪ್ರಕರಣದಲ್ಲಿ ವಿದ್ಯಾರ್ಥಿಯೇ ವಿಷ ಮಿಶ್ರಣ ಮಾಡಿರುವ ಕೃತ್ಯ ಪೊಲೀಸರ ತನಿಖೆ ವೇಳೆ ಬಯಲಾಗಿದೆ.
ತಾಲೂಕಿನ ದೊಡ್ಡಪೊನ್ನಾಂಡಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದ್ದ ಘಟನೆ. ಕಲುಷಿತ ನೀರು ಕುಡಿದು ಗಿರಿಶ್, ಧನು ಮತ್ತು ಡಂಕಣಾಚಾರಿ ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿದ್ಯಾರ್ಥಿಯಿಂದ ಕೃತ್ಯ ನಡೆದಿದೆ. ಆ ವಿದ್ಯಾರ್ಥಿಯೇ ಕುಡಿಯುವ ನೀರಿ ವಿಷ ಮಿಶ್ರಣ ಮಾಡಿರುವುದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.