Thursday, January 29, 2026
Google search engine

Homeರಾಜ್ಯ25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರವಧಿ ಮುಂದುವರಿಕೆ

25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರವಧಿ ಮುಂದುವರಿಕೆ

ಬೆಂಗಳೂರು: ರಾಜ್ಯದ 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರವು 2024 ಜನವರಿ 26 ರಂದು ರಾಜ್ಯದ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಶಾಸಕರುಗಳನ್ನು ನೇಮಕ ಮಾಡಲಾಗಿತ್ತು. ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿತ್ತು. 2026 ಜನವರಿ 26 ಕ್ಕೆ ಎರಡು ವರ್ಷಗಳ ಅವಧಿ ಮುಗಿದ ಹಿನ್ನೆಲೆ ಹಾಲಿ ಅಧ್ಯಕ್ಷರುಗಳನ್ನು ಮುಂದಿನ ಆದೇಶದವರೆಗೂ ಮುಂದುವರೆಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಿಗಮ ಮಂಡಳಿಗಳಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಶಾಸಕರನ್ನೇ ಅಧ್ಯಕ್ಷರಾಗಿ ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ (ಸಚಿವ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳೊಂದಿಗೆ) ಜನವರಿ 26 ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಮುಂದುವರೆಯಲಿದ್ದಾರೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ಉಲ್ಲೇಖಿಸಿದೆ.

25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆಯಾಗಿದ್ದು ಪಟ್ಟಿ ಹೀಗಿದೆ…

RELATED ARTICLES
- Advertisment -
Google search engine

Most Popular