ಮಂಡ್ಯ: ತಮಿಳುನಾಡಿಗೆ ನೀರು ಬಿಡಲು ಪ್ರಾಧಿಕಾರದ ಸೂಚನೆ ಹಿನ್ನಲೆ ಜಿಲ್ಲೆಯಲ್ಲಿ ಕಾವೇರಿ ಕಿಚ್ಚು ಕಾವೇರಿದ್ದು, ರೈತ ಹಿತರಕ್ಷಣಾ ಸಮಿತಿಯಿಂದ ಬೆಂ-ಮೈ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಲಾಗಿದೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತರು ಹೆದ್ದಾರಿ ತಡೆದಿದ್ದು, ಪ್ರಾಧಿಕಾರ, ರಾಜ್ಯ ಸರ್ಕಾರ ಹಾಗೂ ಮಂಡ್ಯ ಸಂಸದರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಹೆದ್ದಾರಿ ತಡೆಯಿಂದ ಕೆಲ ಕಾಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಪ್ರತಿಭಟನೆಯಲ್ಲಿ ಮಾಜಿ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ರೈತ ನಾಯಕಿ ಸುನಂದಾ ಜಯರಾಂ ಕನ್ನಡ ಸೇನೆ ಮಂಜು, ಸೇರಿ ರೈತ ಮುಖಂಡರು ಭಾಗಿಯಾಗಿದ್ದರು.