Friday, April 4, 2025
Google search engine

Homeರಾಜ್ಯಮುಂದುವರಿದ ಸರ್ಕಾರ-ರಾಜ್ಯಪಾಲರ ಸಂಘರ್ಷ: ಮೂರು ಮಸೂದೆಗಳು ವಾಪಸ್

ಮುಂದುವರಿದ ಸರ್ಕಾರ-ರಾಜ್ಯಪಾಲರ ಸಂಘರ್ಷ: ಮೂರು ಮಸೂದೆಗಳು ವಾಪಸ್

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ಮುಂದುವರಿದಿದೆ. ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-೨೦೨೪ ಸೇರಿದಂತೆ ಒಟ್ಟು ಮೂರು ಮಸೂದೆಗಳಿಗೆ ಸಹಿ ಹಾಕದೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರಕ್ಕೆ ವಾಪಸ್ ಕಳುಸಿದ್ದಾರೆ.

ಈ ತಿದ್ದುಪಡಿಯು ಬದಲಾವಣೆ ತರುವ ಉದ್ದೇಶಕ್ಕಿಂತಲೂ ಅಧಿಕಾರ ಕಿತ್ತುಕೊಳ್ಳುವ ಯತ್ನವಾಗಿದೆ ಎಂದು ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆಯನ್ನು ಬೆಳಗಾವಿಯಲ್ಲಿ ನಡೆದಿದ್ದ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ಈ ಮಸೂದೆ ಪ್ರಕಾರ ವಿಶ್ವವಿದ್ಯಾಲಯಗಳಿಗೆ ರಾಜ್ಯಾಪಾಲರ ಬದಲು ಮುಖ್ಯಮಂತ್ರಿಗಳು ಕುಲಾಧಿಪತಿಗಳಾಗಲಿದ್ದಾರೆ. ವಿಶ್ವವಿದ್ಯಾಲಯದ ಎಲ್ಲ ನೇಮಕಾತಿ, ಆಡಳಿತಾತ್ಮಕ ಅಧಿಕಾರ ಮುಖ್ಯಮಂತ್ರಿಗಳಿಗೆ ಸೇರಲಿದೆ. ಈ ಮೂಲಕ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲಾಗಿದೆ.

ಮೈಸೂರು ಪ್ರಾಧಿಕಾರ ಅಭಿವೃದ್ಧಿ ಮಸೂದೆ-೨೦೨೪ ಮತ್ತು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ (ತಿದ್ದುಪಡಿ) ಮಸೂದೆ-೨೦೨೪ಕ್ಕೆ ಸಹಿ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ.

ರಾಜ್ಯಸರ್ಕಾರ ಮಂಡಿಸಿದ ಮಸೂದೆಗಳನ್ನು ಸಹಿ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸುತ್ತಿರುವುದು ಇದು ಮೊದಲೇನಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯನ್ನು ತಡೆಗಟ್ಟುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ಹಲವು ಸ್ಪಷ್ಟನೆ ಕೇಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದರು.

RELATED ARTICLES
- Advertisment -
Google search engine

Most Popular