ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು ರಜೆ ಘೋಷಿಸಿ ಬಂಟ್ವಾಳ ತಹಶೀಲ್ದಾರ್ ಆದೇಶವನ್ನು ಹೊರಡಿಸಿದ್ದಾರೆ.