ಯಾದಗಿರಿ : ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಫೆ.ರಂದು ನಡೆದ ಶಿವಾಜಿ ಜಯಂತಿ ಪ್ರಯುಕ್ತ ನಡೆದ ಬಹಿರಂಗ ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚೋದನಕಾರಿ ಹಾಗೂ ವಿವಾದಾತ್ಮಕ ಭಾಷಣ ಮಾಡಿದ ಆರೋಪದಡಿ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಒಂದು ಸಮುದಾಯದ ವಿರುದ್ಧ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೆ ದೇಶದ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ಆರೋಪವೂ ಕೇಳಿ ಬಂದಿದ್ದು,
ಸಭೆಯಲ್ಲಿ ಈ ದೇಶದಲ್ಲಿ ಇರಬೇಕಾದರೆ ಒಂದೇ ಮಾತರಂ ಹೇಳಬೇಕು ಎಂಬ ಹೇಳಿಕೆ ನೀಡಿದ ಅವರು, ಮಹಾತ್ಮಾ ಗಾಂಧಿ ಕುರಿತು ಗಾಂಧೀಜಿ ಪಾಕಿಸ್ತಾನದ ಪಿತಾಮಹ ಎಂದು ಹೇಳಿಕೆ ನೀಡಿರುವುದಾಗಿ ಆರೋಪಿಸಲಾಗಿದೆ.
ಇನ್ನೂ ಶಾಸಕರ ಈ ಹೇಳಿಕೆಗಳು ಸಮಾಜದ ಶಾಂತಿ ಹಾಗೂ ಸೌಹಾರ್ದತೆಗೆ ಧಕ್ಕೆ ತರುವಂತಿವೆ ಎಂದು ಪರಿಗಣಿಸಿ, ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದ್ದು, ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 196, 299, 302, 352 ಹಾಗೂ 353 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಹಾಗೂ ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.



