Monday, April 21, 2025
Google search engine

Homeಸ್ಥಳೀಯಹುಲಿ ಸೆರೆಗೆ ಶೀಘ್ರದಲ್ಲೇ ಕೂಂಬಿಂಗ್ ಆಪರೇಷನ್ : ಶಾಸಕ ದರ್ಶನ್ ಧ್ರುವನಾರಾಯಣ್

ಹುಲಿ ಸೆರೆಗೆ ಶೀಘ್ರದಲ್ಲೇ ಕೂಂಬಿಂಗ್ ಆಪರೇಷನ್ : ಶಾಸಕ ದರ್ಶನ್ ಧ್ರುವನಾರಾಯಣ್

ಮೈಸೂರು : ಹಸುವನ್ನು ಬಲಿ ಪಡೆದು ದನಗಾಹಿ ಮೇಲೆ ದಾಳಿ ನಡೆಸಿದ ಹುಲಿ ಸೆರೆಗೆ ಶೀಘ್ರದಲ್ಲೇ ಕೂಂಬಿಂಗ್ ಆಪರೇಷನ್ ಪ್ರಾರಂಭಿಸುವುದಾಗಿ ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಾಯಗೊಂಡು ಚಿಕಿತ್ಸೆ ಪಡೆದುಕೊಳ್ಳುತ್ತಿರುವ ವೀರಭದ್ರ ಭೋವಿ ಅವರಿಗೆ ಖರ್ಚು ವೆಚ್ಚಗಳನ್ನು ಸರ್ಕಾರ ಮತ್ತು ಅರಣ್ಯ ಇಲಾಖೆಯಿಂದ ಭರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ತಾವು ಕೂಡ ವೈಯಕ್ತಿಕವಾಗಿ ಪರಿಹಾರ ನೀಡಿ ಆತ್ಮಸ್ಥೈರ್ಯ ತುಂಬಿರುವುದಾಗಿ ತಿಳಿಸಿದರು. ಕಳೆದ ವರ್ಷ ಹಾದನೂರು, ಒಡೆಯನಪುರ ಗ್ರಾಮದ ದನಗಾಹಿ ಒಬ್ಬರನ್ನು ಹುಲಿ ಬಲಿ ಪಡೆದುಕೊಂಡಿತ್ತು. ಒಂದು ವರ್ಷ ಕಳೆದರೂ ಸಹ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಯನ್ನು ಸೆರೆ ಹಿಡಿದಿಲ್ಲ. ಈ ವಿಚಾರವಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಸ್ಪಷ್ಟ ಮಾಹಿತಿಯನ್ನು ಕೂಡ ನಮ್ಮ ಗಮನಕ್ಕೆ ತಂದಿಲ್ಲ. ಹುಲಿಯನ್ನು ಸೆರೆ ಹಿಡಿಯಲು ಆನೆಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಕಾಡಂಚಿನ ನಿವಾಸಿಗಳಿಗೆ ಈ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸುವುದಾಗಿ ಅವರು ಹೇಳಿದರು. ಈ ಕುರಿತಂತೆ ನವೆಂಬರ್ ೫ ರಂದು ಹೆಡಿಯಾಲ ಭಾಗದಲ್ಲಿ ಸಭೆ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ನಾಗರಹೊಳೆ ವನ್ಯಜೀವಿ ವಿಭಾಗದ ಮೀಸಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕಾಡಂಚಿನಲ್ಲಿ ಗ್ರಾಮದ ಹೊರಾವರಣದಲ್ಲಿ ದನ ಮೇಯಿಸಲು ಹೋಗಿದ್ದಾಗ ಹಸುವಿನ ಮೇಲೆ ಹುಲಿ ದಾಳಿ ಮಾಡಿದ ದೃಶ್ಯ ಕಂಡು ರಕ್ಷಿಸಲು ಹೋದ ರೈತನ ಮೇಲೆ ಹುಲಿ ಎರಗಿತ್ತು. ರಮೇಶ್ ಜೋರಾಗಿ ಕಿರುಚಾಡಿದಾಗ, ಅಕ್ಕಪಕ್ಕದಲ್ಲಿ ದನ ಮೇಯಿಸುತ್ತಿದ್ದ ದನಗಾಹಿಗಳು ಹೋಗಿ ಹುಲಿಯನ್ನು ಓಡಿಸಿದ್ದರು. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

RELATED ARTICLES
- Advertisment -
Google search engine

Most Popular