ಮಂಗಳೂರು: ಕೇರಳದಲ್ಲಿ ಆತಂಕ ಸೃಷ್ಟಿಸಿರುವ ಕೊರೊನಾ ವೈರಸ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಕೊರೊನಾ ತಪಾಸಣೆ ನಡೆಸಲಾಗಿದೆ.
ಉಡುಪಿ ಜಿಲ್ಲೆಯ ೮೨ ವರ್ಷದ ವೃದ್ದರೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಕೊರೊನಾ ತಪಾಸಣೆ ನಡೆಸಿದಾಗ ಪಾಸಿಟಿವ್ ಬಂದಿದೆ. ಮೊದಲ ದಿನವೆ ಒಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ ಮಾತನಾಡಿ, ಅವರಿಗೆ ಆಸ್ಪತ್ರೆಯಲ್ಲಿ ಐಸೋಲೇಸನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆಯಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ವಹಿಸಲು ರಾಜ್ಯ ಸರ್ಕಾರ ಕಟ್ಟೆಚ್ಚರ ವಹಿಸಿದೆ. ೬೦ ವರ್ಷದ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮಾಸ್ಕ್ ಧರಿಸುವುದು ಸೇರಿದಂತೆ ಹಲವರು ಮಾರ್ಗಸೂಚಿಗಳನ್ನು ಹೊರಡಿಸಿದೆ.
ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಜನದಟ್ಟಣೆಯಿಂದಾಗಿ ಮತ್ತಷ್ಟು ಪ್ರಕರಣಗಳ ಹೆಚ್ಚಳವಾಗುವ ಸಂಭವವಿದೆ. ಹಾಗಾಗಿ, ಈ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಕೋವಿಡ್ ರಾಜ್ಯ ತಾಂತ್ರಿಕ ಸಲಹಾ ಸಮಿತಿ ಮಾರ್ಗಸೂಚಿಯನ್ನು ಶಿಫಾರಸು ಮಾಡಿದೆ. ಜತೆಗೆ ಎಲ್ಲ ಹಿರಿಯ ನಾಗರೀಕರು ೬೦ ವರ್ಷ ಹಾಗೂ ಮೇಲ್ಪಟ್ಟವರು ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಕಡ್ಡಯಾವಗಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಲಾಗಿದೆ.
ಸೋಂಕಿನ ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ. ಇದರ ನಿರ್ವಹಣೆಗೆ ಎಲ್ಲ ರೀತಿಯ ಸಿದ್ಧತೆ ನಡೆಸಲಾಗಿದೆ. ಕೋವಿಡ್ ರೋಗಿಗಳಿಗಾಗಿ ಐಸೋಲೇಷನ್ ವಾರ್ಡ್, ರೂಂ, ಆಕ್ಸಿಜನ್ ಬೆಡ್, ಐಸಿಯು ಬೆಡ್ ಮತ್ತು ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.